ಕಾವೇರಿ ಮರುಪರಿಶೀಲನಾ ಅರ್ಜಿ ನಾಳೆ ವಿಚಾರಣೆ

By Suvarna Web DeskFirst Published Apr 6, 2017, 4:52 PM IST
Highlights
ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.
ಶುಕ್ರವಾರ ಮಧ್ಯಾಹ್ನ ನಂತರ ನ್ಯಾ.ದೀಪಕ್ ಮಿಶ್ರಾ ಮತ್ತು ನ್ಯಾ.ಯು.ಯು.ಲಲಿತ್ ಅವರನ್ನೊಳಗೊಂಡ ನ್ಯಾಯಪೀಠ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
ನವದೆಹಲಿ (ಏ.06): ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.
ಶುಕ್ರವಾರ ಮಧ್ಯಾಹ್ನ ನಂತರ ನ್ಯಾ.ದೀಪಕ್ ಮಿಶ್ರಾ ಮತ್ತು ನ್ಯಾ.ಯು.ಯು.ಲಲಿತ್ ಅವರನ್ನೊಳಗೊಂಡ ನ್ಯಾಯಪೀಠ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
 
ರಾಜ್ಯದ ಕಾವೇರಿ ಕೊಳ್ಳದಲ್ಲಿ ತೀವ್ರ ಕ್ಷಾಮವಿದ್ದು ಕುಡಿಯುವ ನೀರಿಗೂ ತತ್ವಾರವಿದೆ. ಆದ್ದರಿಂದ ತಮಿಳುನಾಡಿಗೆ ಸುಪ್ರೀಂ ಆದೇಶದಂತೆ 6000 ಕ್ಯುಸೆಕ್ ನೀರು ಬಿಡುವ ಸ್ಥಿತಿಯಲ್ಲಿ ರಾಜ್ಯವಿಲ್ಲ. ಆದ್ದರಿಂದ ಆದೇಶವನ್ನು ಮರುಪರಿಶೀಲಿಸಬೇಕು ಎಂದು ರಾಜ್ಯ ಕಳೆದ ಅಕ್ಟೋಬರ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯದಲ್ಲೇ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿತ್ತು. ಸಾಮಾನ್ಯವಾಗಿ ಮರು ಪರಿಶೀಲನಾ ಅರ್ಜಿ ವಿಚಾರಣೆ ನ್ಯಾಯಾಧೀಶರ ಕೊಠಡಿಯಲ್ಲೇ ನಡೆಯುತ್ತದೆ.
click me!