ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ ಬ್ಯಾಂಕ್'ಗಳು ಬಂದ್

Published : Aug 21, 2017, 11:21 AM ISTUpdated : Apr 11, 2018, 01:10 PM IST
ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ ಬ್ಯಾಂಕ್'ಗಳು ಬಂದ್

ಸಾರಾಂಶ

ಬ್ಯಾಂಕ್​ ಗ್ರಾಹಕರೇ ನಿಮ್ಮ ಎಲ್ಲ ಕೆಲಸಗಳನ್ನು ಇಂದೇ ಮುಗಿಸಿಕೊಳ್ಳಿ. ಯಾಕಂದ್ರೆ ನಾಳೆ ಬ್ಯಾಂಕ್​ಗಳು ಬಂದ್​​ ಆಗಲಿವೆ. ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಉದ್ಯೋಗಿಗಳು ನಾಳೆ ಒಂದು ದಿನದ ಮುಷ್ಕರ ನಡೆಸಲಿದ್ದಾರೆ. ಹೀಗಾಗಿ ದೇಶದಾದ್ಯಂತ ಬ್ಯಾಂಕಿಂಗ್‌ ವಹಿವಾಟಿಗೆ ಧಕ್ಕೆ ಆಗುವ ಸಾಧ್ಯತೆ ಇದೆ.

ನವದೆಹಲಿ(ಆ.21): ಬ್ಯಾಂಕ್​ ಗ್ರಾಹಕರೇ ನಿಮ್ಮ ಎಲ್ಲ ಕೆಲಸಗಳನ್ನು ಇಂದೇ ಮುಗಿಸಿಕೊಳ್ಳಿ. ಯಾಕಂದ್ರೆ ನಾಳೆ ಬ್ಯಾಂಕ್​ಗಳು ಬಂದ್​​ ಆಗಲಿವೆ. ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಉದ್ಯೋಗಿಗಳು ನಾಳೆ ಒಂದು ದಿನದ ಮುಷ್ಕರ ನಡೆಸಲಿದ್ದಾರೆ. ಹೀಗಾಗಿ ದೇಶದಾದ್ಯಂತ ಬ್ಯಾಂಕಿಂಗ್‌ ವಹಿವಾಟಿಗೆ ಧಕ್ಕೆ ಆಗುವ ಸಾಧ್ಯತೆ ಇದೆ.

ಒಂಬತ್ತು ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ ಆಶ್ರಯದಲ್ಲಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ.  10 ಲಕ್ಷದಷ್ಟು ಬ್ಯಾಂಕ್‌ ಉದ್ಯೋಗಿಗಳು ವೇದಿಕೆಯ ಸದಸ್ಯರಾಗಿದ್ದಾರೆ. ಬ್ಯಾಂಕ್‌ಗಳ  ಖಾಸಗೀಕರಣ ಯತ್ನ ವಿರೋಧಿಸಿ ಮತ್ತು ಇತರ ಬೇಡಿಕೆಗಳಿಗೆ ಒತ್ತಾಯಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಖಾಸಗಿ ಬ್ಯಾಂಕ್‌'ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದರೆ, ಚೆಕ್‌ ಕ್ಲಿಯರನ್ಸ್‌ ವಿಳಂಬವಾಗಬಹುದು.

ಸರ್ಕಾರಿ ಸ್ವಾಮ್ಯದ 21 ಬ್ಯಾಂಕ್‌ಗಳು ಶೇ 75ರಷ್ಟು ಬ್ಯಾಂಕಿಂಗ್‌ ವಹಿವಾಟಿನ ಮೇಲೆ ನಿಯಂತ್ರಣ ಹೊಂದಿವೆ. ಉದ್ದಿಮೆ ಸಂಸ್ಥೆಗಳ ವಸೂಲಾಗದ ಸಾಲ ವಜಾ ಮಾಡುವ ನೀತಿ ಕೈಬಿಡಬೇಕು, ಉದ್ದೇಶಪೂರ್ವಕ ಸುಸ್ತಿದಾರರಾಗುವುದನ್ನು ಕ್ರಿಮಿನಲ್‌ ಅಪರಾಧ ಎಂದು ಘೋಷಿಸಬೇಕು, ಎನ್‌ಪಿಎ ವಸೂಲಾತಿಗೆ ಸಂಸತ್‌ ಸಮಿತಿ ಶಿಫಾರಸುಗಳನ್ನು ಜಾರಿಗೆ ತರಬೇಕು ಎನ್ನುವುದು ಇವರ ಬೇಡಿಕೆಗಳಾಗಿವೆ. ಅಲ್ಲದೇ, ಎನ್‌ಪಿಎ ಹೊರೆಯನ್ನು ವಿವಿಧ ಶುಲ್ಕಗಳ ಹೆಚ್ಚಳದ ನೆಪದಲ್ಲಿ ಗ್ರಾಹಕರ ಮೇಲೆ ವಿಧಿಸಬಾರದು ಎಂದು ಆಗ್ರಹಿಸಿದ್ದಾರೆ..

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು