ಇಂದು ವಿಶೇಷ ಅಧಿವೇಶನ : ಏನಾಗಬಹುದು ?

Published : Oct 02, 2016, 08:30 AM ISTUpdated : Apr 11, 2018, 12:43 PM IST
ಇಂದು ವಿಶೇಷ ಅಧಿವೇಶನ : ಏನಾಗಬಹುದು ?

ಸಾರಾಂಶ

ಬೆಂಗಳೂರು(ಅ.2): ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಬೇಕೆ ಅಥವಾ ಸದನದ ನಿರ್ಣಯಕ್ಕೆ ಬದ್ದರಾಗಿರಬೇಕೇ ಎಂಬುದರ ಗೊಂದಲದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇಂದು  2ನೇ ಬಾರಿ ವಿಶೇಷ ವಿಧಾನಮಂಡಲ ಅಧಿವೇಶನ ಕರೆದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸದನ ಆರಂಭವಾಗಲಿದ್ದು,  ತಮಿಳುನಾಡಿಗೆ ನೀರು ಬಿಟ್ಟರೆ ಮತ್ತು ಬಿಡದಿದ್ದರೆ ಆಗುವ ಸಾಧಕ ಬಾದಕಗಳ ಕುರಿತು ಚರ್ಚೆ ನಡೆಯಲಿದೆ.  ನ್ಯಾಯಾಂಗ ನಿಂದನೆ ತೂಗುಗತ್ತಿ ಸರ್ಕಾರದ ನೆತ್ತಿಯ ಮೇಲೆ ತೂಗಾಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ತಮಿಳುನಾಡಿಗೆ ನೀರು ಹರಿಸುವ ಕುರಿತಂತೆ ಪ್ರತಿಪಕ್ಷಗಳಿಗೆ ಮನವರಿಕೆ ಮಾಡಿಕೊಡುವ ಸಾಧ್ಯತೆ ಹೆಚ್ಚಿದೆ.

ಕಾವೇರಿ ಕೊಳ್ಳದಲ್ಲಿ ಒಳ ಹರಿವಿನಿಂದ ಹೆಚ್ಚಾಗಿರುವ ನೀರನ್ನು ಬಿಡುವ ಕುರಿತಂತೆ ಸರ್ಕಾರ ನಿರ್ಣಯ ಕೈಗೊಳ್ಳಬಹುದು. ಆ ಮೂಲಕ ನ್ಯಾಯಾಂಗ ನಿಂದನೆಯಿಂದ ಸರ್ಕಾರ ಪಾರಗಲು ಯತ್ನಿಸಬಹುದು. ಇನ್ನು ಕುಡಿಯುವ ನೀರಿಗಾಗಿ ಮಾತ್ರ ಕಾವೇರಿ ಎಂದು ಈ ಹಿಂದಿನ ವಿಶೇಷ ಅಧಿವೇಶನದಲ್ಲಿ  ಪಾಸ್ ಮಾಡಿದ್ದ ನಿರ್ಣಯವನ್ನು ಬದಲಾಯಿಸಿ, ಮಂಡ್ಯ ಭಾಗದಲ್ಲಿ ರೈತರು ಬೆಳೆದಿರುವ ಬೆಳೆಗಳಿಗೆ ನೀರು ಬಿಡುವ ಕುರಿತಂತೆ ನಿರ್ಣಯವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಮತ್ತೊಂದೆಡೆ ಸುಪ್ರೀಂಕೋರ್ಟ್ ಆದೇಶ ಮರು ಪರಿಶೀಲನೆಗೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!