ಕಾವೇರಿ ಬಿಕ್ಕಟ್ಟು; ನಾಳೆ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ

By Internet DeskFirst Published Sep 26, 2016, 10:47 AM IST
Highlights

ಬೆಂಗಳೂರು (ಸೆ.26): ಕಾವೇರಿ ವಿಚಾರವಾಗಿ ಕರ್ನಾಟಕ ಸಲ್ಲಿಸಿದ್ದ ಮೇಲ್ವಿಚಾರಣ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಾಳೆ ವಿಚಾರಣೆ ನಡೆಸಲಿದೆ. 

ಪ್ರತಿನಿತ್ಯ  6 ಸಾವಿರ ಕ್ಯೂಸೆಕ್‌‌ ನೀರು ಬಿಡಲು ನೀಡಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍'ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.

Latest Videos

ಸೆ. 20ರಂದು ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲನೆ ಮಾಡಲು ಉಂಟಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್‍ಗೆ ಮನವರಿಕೆ ಮಾಡಿಕೊಡಲು ಸರ್ಕಾರ ಪ್ರಯತ್ನಿಸಿದೆ. ರಾಜ್ಯದ ಪ್ರಮುಖ ನಗರಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿವೆ. ಡಿಸಂಬರ್ ನಲ್ಲಿ  ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಬಿಡಬಹುದು. ಅಲ್ಲಿಯವರೆಗೆ ಬಿಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಇಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದು ನ್ಯಾಯಾಲಯ ನಾಳೆ ವಿಚಾರಣೆ ನಡೆಸಲಿದೆ.

ಕಾವೇರಿ ಕೊಳ್ಳದ ಜಲಾಶಯಗಳಾದ ಕೆಆರ್ ಎಸ್, ಕಬಿನಿ, ಹೇಮಾವತಿ, ಹಾರಂಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಹಾಗಾಗಿ ಕಾವೇರಿ ಕೊಳ್ಳ ಭಾಗದ ಜನರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಕುಡಿಯುವುದಕ್ಕಾಗಿ ಮಾತ್ರ ಕಾವೇರಿ ನೀರು ಎನ್ನುವ ಘೋಷವಾಕ್ಯದೊಂದಿಗೆ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ. 

click me!