ನೇತ್ರಾವತಿ ಸೇತುವೆ ಮೇಲೆ ವಾಹನ ಸಂಚಾರ ಅಸ್ತವ್ಯಸ್ತ

By Web Desk  |  First Published Jul 31, 2019, 9:18 AM IST

ಕಾಫಿ ಡೇ ಮಾಲಿಕ ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಅವರ ಬಿದ್ದ ಸ್ಥಳ ನೇತ್ರಾವತಿ ಸೇತುವೆ ಮೇಲೆ ಭಾರೀ ಟ್ರಾಫಿಕ್ ಜಾಮ್ ಆಗಿತ್ತು. 


ಮಂಗಳೂರು [ಜು.31]: ಸೇತುವೆಯಿಂದ ನದಿಗೆ ಜಿಗಿದು ಮಾಜಿ ಸಿಎಂ ಅಳಿಯ ನೀರು ಪಾಲಾಗಿದ್ದಾರೆ ಎಂಬ ಸುದ್ದಿ ಹರಡಿದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ನೇತ್ರಾವತಿ ಸೇತುವೆ ಮೇಲೆ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. 

ಮಂಗಳವಾರ ಬೆಳಗ್ಗೆ 7 ಗಂಟೆಯಿಂದ ಶೋಧ ಕಾರ್ಯಾಚರಣೆ ಆರಂಭಗೊಂಡಾಗ, ಕುತೂಹಲಗೊಂಡ ನಾಗರಿಕರು ಸೇತುವೆಯ ಇಕ್ಕೆಲಗಳಲ್ಲಿ ಜಮಾಯಿಸಿದರು. 

Latest Videos

undefined

ಡಾ| ರಾಜ್‌ ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಉದ್ಯಮಿ ಸಿದ್ಧಾರ್ಥ್ !

ಘಟನಾ ಸ್ಥಳದಲ್ಲಿ ಪೊಲೀಸ್‌ ಭದ್ರತೆ ಹಾಕಲಾಗಿತ್ತು. ನೇತ್ರಾವತಿ ಸೇತುವೆಯು ರಾಷ್ಟ್ರೀಯ ಹೆದ್ದಾರಿ 66, ಮಂಗಳೂರು-ಕೇರಳವನ್ನು ಸಂಪರ್ಕಿಸುವ ಹೆದ್ದಾರಿಯಾಗಿದೆ. ಆದ್ದರಿಂದ ಈ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಸಾಮಾನ್ಯ. ಸೇತುವೆ ಕೆಳಭಾಗದಲ್ಲಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದುದರಿಂದ ಜನಸಮೂಹ ಸೇರಿದ ಪರಿಣಾಮ ಸುಮಾರು ಒಂದೂವರೆ ಗಂಟೆ ಕಾಲ ಟ್ರಾಫಿಕ್‌ ಜಾಮ್‌ ಉಂಟಾಯಿತು. 

ಬಳಿಕ ಪೊಲೀಸರು ಹರಸಾಹಸಪಟ್ಟು ಜನತೆಯನ್ನು ಚದುರಿಸಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

click me!