
ಬೆಂಗಳೂರು : ಸಂಚಾರ ನಿಯಮ ಉಲ್ಲಂಘಿಸಿದ ಆಟೋಗಳ ವಿರುದ್ಧ ಸಂಚಾರ ಪೊಲೀಸರ ಕಾರ್ಯಾ ಚರಣೆ ಮುಂದುವರೆದಿದ್ದು, ಮಂಗಳವಾರ ಕಾನೂನು ಮೀರಿದ ಆಟೋಗಳ ಮೇಲೆ 3 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಿಸಿದ್ದಾರೆ.
ಅಧಿಕ ಬಾಡಿಗೆ ಪಡೆಯುವುದು, ಪ್ರಯಾಣಿಕರು ಕರೆದ ಕಡೆ ಹೋಗದಿರುವುದು ಸೇರಿದಂತೆ ಸಂಚಾರ ನಿಯಮ ಉಲ್ಲಂಘಿಸಿದ ಆಟೋಗಳಿಗೆ ಪೊಲೀಸರು ಬಿಸಿ ಮುಟ್ಟಿ ಸಿದ್ದು, ಈ ಸಂಬಂಧ ನಗರ ವ್ಯಾಪ್ತಿಯಲ್ಲಿ ಸೋಮವಾರದಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಮೊದಲ ದಿನ 6000 ಕ್ಕೂ ಅಧಿಕ ಪ್ರಕರಣ ದಾಖಲಿಸಿದ್ದ ಪೊಲೀಸರು, ಮಂಗಳವಾರ ಕೂಡಾ ಆಟೋಗಳ ಮೇಲೆ ಕಾನೂನು ಕ್ರಮ ಜರುಗಿಸಿದ್ದಾರೆ. ಇದುವರೆಗೆ 9787 ಪ್ರಕರಣಗಳು ದಾಖಲಿಸಿಕೊಂಡು 900 ಆಟೋಗಳನ್ನು ಜಪ್ತಿ ಮಾಡಿ ದ್ದಾರೆ.
ಮೆಜೆಸ್ಟಿಕ್, ಸಿಟಿ ರೈಲ್ವೆ ನಿಲ್ದಾಣ, ಕಾರ್ಪೋ ರೇಷನ್ ಸರ್ಕಲ್, ಎಂ.ಜಿ.ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚಿನದಾಗಿ ಆಟೋಗಳಿಗೆ ದಂಡ ಪ್ರಯೋಗವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.