
ಮಡಿಕೇರಿ(ಅ.27): ದಿಡ್ಡಳ್ಳಿ ಆದಿವಾಸಿಗಳ ಹೋರಾಟ ನಿಮಗೆಲ್ಲ ನೆನಪಿದೆ ಅನ್ನಿಸುತ್ತೆ. ಏಕಾಏಕಿ ಆದಿವಾಸಿಗಳನ್ನು ಜಿಲ್ಲಾಡಳಿತ ಒಕ್ಕಲೆಬ್ಬಿಸಿದಾಗ. ಭಿನ್ನ ವಿಭಿನ್ನ ಪ್ರತಿಭಟನೆ ಮೂಕ ಜಿಲ್ಲಾಡಳಿತವನ್ನೇ ನಡುಗಿಸಿಬಿಟ್ಟಿದ್ದರು. ಈ ಹೋರಾಟ ಭಾರೀ ಮಟ್ಟದಲ್ಲಿ ಸುದ್ದಿಯಾಗುತ್ತಲೇ ಮಣಿದ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಒಕ್ಕಲೆಬ್ಬಿಸಿದ್ದ 500 ಕುಟುಂಬಗಳಿಗೂ ಮನೆ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿತ್ತು. ಆಗ ಪ್ರತಿಭಟನೆ ವಾಪಾಸ್ ಪಡೆದಿದ್ದ ಆದಿವಾಸಿಗಳು ಈಗ ಮತ್ತೊಮ್ಮೆ ಹೋರಾಟಕ್ಕಿಳಿಯುವ ಮುನ್ಸೂಚನೆ ಕೊಟ್ಟಿದ್ದಾರೆ. ಯಾಕಂದ್ರೆ ಜಿಲ್ಲಾಡಳಿತ ಹೇಳಿದ್ದಕ್ಕಿಂತ ಚಿಕ್ಕ ಮನೆಗಳನ್ನ ನಿರ್ಮಾಣ ಮಾಡಿಕೊಡಲು ಮುಂದಾಗಿದ್ದೇ ಇವರ ಆಕ್ರೋಶಕ್ಕೆ ಕಾರಣ.
ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ವ್ಯಾಪ್ತಿಯಲ್ಲಿ ಒಕ್ಕಲೆಬ್ಬಿಸಿದ್ದ ದಿಡ್ಡಳ್ಳಿ ಆದಿವಾಸಿಗಳಿ ನಿವೇಶನ ನಿರ್ಮಿಸಲಾಗುತ್ತಿದೆ. ಕೇವಲ ನಾಲ್ಕು ಲಕ್ಷ ವೆಚ್ಚದಲ್ಲಿ ಚಿಕ್ಕ ಚಿಕ್ಕ ಮನೆಗಳನ್ನ ಅದು ಕಳಪೆ ಗುಣಮಟ್ಟದ ಮನೆಗಳನ್ನು ನಿರ್ಮಿಸುತ್ತಿದ್ದಾರಂತೆ. ಇನ್ನೂ ಮಕ್ಕಳಿಗೆ ಅಲ್ಲಿಯೇ ಅಂಗನವಾಡಿ ನಿರ್ಮಿಸಿ ಕೊಡಿ ಅನ್ನೋ ಬೇಡಿಕೆಗೂ ಸ್ಪಂದನೆ ಸಿಕ್ಕಿಲ್ಲವಂತೆ.
ಒಟ್ಟಿನಲ್ಲಿ, ಜಿಲ್ಲಾಡಳಿತ ತನ್ನ ಮಾತನ್ನೇ ತಾನು ಪಾಲಿಸುತ್ತಿಲ್ಲ ಅನ್ನೋದು ಆದಿವಾಸಿಗಳ ಆರೋಪ. ಜಿಲ್ಲಾಡಳಿತದ ಈ ನಡೆ ದಿಡ್ಡಳ್ಳಿಯಲ್ಲಿ ಮತ್ತೊಂದು ಹೋರಾಟಕ್ಕೆ ನಾಂದಿ ಹಾಡಿದ್ರೂ ಅಚ್ಚರಿಯಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.