
ನವದೆಹಲಿ (ಅ.19): ಕೃಷ್ಣಾ ನದಿ ನೀರು ಹಂಚಿಕೆ ವಿಚಾರವಾಗಿ ಇವತ್ತು ಕೃಷ್ಣಾ ನ್ಯಾಯಾಧಿಕರಣ ತೀರ್ಪು ನೀಡಲಿದೆ.
2010ರಲ್ಲಿ ಕೃಷ್ಣಾ ನ್ಯಾಯಾಧಿಕರಣ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ನಡುವೆ ನೀರು ಹಂಚಿಕೆ ಮಾಡಿದೆ. ಆದರೆ ಇದಕ್ಕೆ ಮೂರು ರಾಜ್ಯಗಳ ಮಧ್ಯೆ ಅಪಸ್ವರ ಇತ್ತು. ಹೀಗಿರುವಾಗಲೇ ಆಂಧ್ರಪ್ರದೇಶ ವಿಭಜನೆಯಾಗಿ ತೆಲಾಂಗಣ ರಾಜ್ಯ ಉದಯಿಸಿದ ನಂತರ ಹೊಸ ತಕರಾರು ಶುರುವಾಗಿದೆ.
ನಾಲ್ಕು ರಾಜ್ಯಗಳ ನಡುವೆ ಕೃಷ್ಣ ನದಿ ನೀರು ಮರುಹಂಚಿಕೆ ಮಾಡಬೇಕು ಎಂದು ತೆಲಂಗಾಣ ಅರ್ಜಿ ಸಲ್ಲಿಸಿದೆ. ಆದರೆ ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿವೆ.
ಆಂಧ್ರದಿಂದ ತೆಲಂಗಾಣ ಪ್ರತ್ಯೇಕವಾಗಿದೆ. ಹೀಗಾಗಿ ಆಧ್ರಪ್ರದೇಶ ರಾಜ್ಯಕ್ಕೆ ಹಂಚಿಕೆಯಾದ ನೀರಿನಲ್ಲೇ ತೆಲಂಗಾಣ ಕೂಡ ಪಾಲು ಪಡೆಯಬೇಕು ಎಂದು ಕರ್ನಾಟಕ, ಮಹಾರಾಷ್ಟ್ರದ ವಾದ.
ಈ ಸಂಬಂಧ ಇವತ್ತು ಬೆಳಗ್ಗೆ 11 ಗಂಟೆಗೆ ಕೃಷ್ಣ ನ್ಯಾಯಾಧಿಕರಣ ತೀರ್ಪು ಪ್ರಕಟಿಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.