ಅನಂತ್ ವಿಧಿವಶ: ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಗಣ್ಯರ ಸಂತಾಪ

Published : Nov 12, 2018, 07:19 AM ISTUpdated : Nov 12, 2018, 04:04 PM IST
ಅನಂತ್ ವಿಧಿವಶ: ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಗಣ್ಯರ ಸಂತಾಪ

ಸಾರಾಂಶ

ಅನಂತ್ ಕುಮಾರ್ ಅವರ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್’ನಾಥ್ ಕೋವಿಂದ ಸೇರಿದಂತೆ ಹಲವು ದಿಗ್ಗಜರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು[ನ.12]: ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅನಂತ್ ಕುಮಾರ್ ನಿಧನಕ್ಕೆ ಸರಣಿ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.

ಅನಂತ್ ಕುಮಾರ್ ಅವರ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್’ನಾಥ್ ಕೋವಿಂದ ಸೇರಿದಂತೆ ಹಲವು ದಿಗ್ಗಜರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. 

ಅನಂತ್ ಕುಮಾರ್ ನಿಧನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸುಮಿತ್ರಾ ಮಹಾಜನ್ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ. 

ಇನ್ನು ಸ್ವತಃ ಕ್ಯಾನ್ಸರ್’ನೊಂದಿಗೆ ಹೋರಾಡುತ್ತಿರುವ ಮಾಜಿ ರಕ್ಷಣಾ ಮಂತ್ರಿ ಹಾಗೂ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಕೂಡಾ ಅನಂತ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

 

ಬಿಜೆಪಿ ನಾಯಕ ಅನಂತ್ ಕುಮಾರ್ ನಿಧನಕ್ಕೆ ಸಂಸದ ರಾಜೀವ್ ಚಂದ್ರಶೇಖರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. 

ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಕಂಬನಿ ಮಿಡಿದಿದ್ದಾರೆ.

ಅನಂತ್ ಕುಮಾರ್ ಅವರ ನಿಧನಕ್ಕೆ AICC ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. 

Live Updates: ಕೇಂದ್ರ ಸಚಿವ ಅನಂತ ಕುಮಾರ್ ಇನ್ನಿಲ್ಲ

ಆತ್ಮೀಯ ಗೆಳೆಯ ಹಾಗೂ ಸ್ನೇಹಿತರಾದ ಅನಂತ್ ಕುಮಾರ್ ಅವರ ಸಾವು ಅತೀವ ನೋವುಂಟು ಮಾಡಿಡೆ. ಅವರೊಬ್ಬ ಅದ್ಭುತ ನಾಯಕ. ಅತಿ ಚಿಕ್ಕ ವಯಸ್ಸಿನಲ್ಲೇ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡ ರೀತಿ ನಿಜಕ್ಕೂ ಅನನ್ಯ. ಅವರ ಈ ಎಲ್ಲಾ ಒಳ್ಳೆಯ ಕೆಲಸಗಳು ಎಂದಿಗೂ ನೆನಪಿನಲ್ಲಿ ಉಳಿಯುವಂತಹವು ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಮತ್ತೊಂದು ಟ್ವೀಟ್’ನಲ್ಲಿ, ಸಚಿವಾಲಯದ ಅನೇಕ ಖಾತೆಗಳನ್ನು ನಿರ್ವಿಸಿದ್ದ ಅನಂತ್ ಕುಮಾರ್ ಅವರು ಓರ್ವ ದಕ್ಷ ಆಡಳಿತಗಾರ, ಬಿಜೆಪಿಯ ಬಹುದೊಡ್ಡ ಸ್ವತ್ತು. ಕರ್ನಾಟಕದಲ್ಲಿ, ಅದರಲ್ಲೂ ಬೆಂಗಳೂರು ಹಾಗೂ ಸುತ್ತಮತ್ತ ಬಿಜೆಪಿ ಬಲಿಷ್ಠವಾಗಿ ಬೆಳೆಯಲು ಶ್ರಮಿಸಿದ್ದರು. ತಮ್ಮ ಕ್ಷೇತ್ರದಲ್ಲಿ ಜನರಿಗೆ ಸುಲಭವಾಗಿ ಸಿಗುತ್ತಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೊಂದು ಟ್ವೀಟ್’ನಲ್ಲಿ ನಾನು ಅನಂತ್ ಕುಮಾರ್ ಅವರ ಪತ್ನಿ ಡಾ. ತೇಜಸ್ವಿನಿ ಅವರ ಬಳಿ ಸಂತಾಪ ಸೂಚಿಸಿದ್ದೇನೆ. ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರಿಗೆ,  ಸ್ನೇಹಿತರಿಗೆ, ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಸುರೇಶ್ ಕುಮಾರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು