
ಡೆಹ್ರಾಡೂನ್ (ಮಾ.18): ಉತ್ತರಾಖಂಡ ರಾಜ್ಯದ 9ನೇ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಕೃಷ್ಣಕಾಂತ್ ಪೌಲ್ ರಾವತ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ರಾವರ್ ಜತೆ ಪ್ರಕಾಶ್ ಪಂತ್, ಮಸನ್ ಕೌಶಿಕ್, ಯಶ್ಪಾಲ್ ಆರ್ಯ, ಸುಬೋಧ್ ಉನಿಯಾಲ್ ಹಾಗೂ ರೇಖಾ ಆರ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್. ಜತಗ್ ಪ್ರಕಾಶ್ ನಡ್ಡಾ ಹಾಗೂ ಉಮಾಭಾರತಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಡೋಯಿವಾಲಾ ಕ್ಷೇತ್ರದಿಂದ ಶಾಸಕನಾಗಿರುವ ರಾವತ್, ಕಾಂಗ್ರೆಸ್ ಪ್ರತಿಸ್ಪರ್ಧಿಯನ್ನು 24 ಸಾವಿರ ವೋಟುಗಳ ಅಂತರದಿಂದ ಮಣಿಸಿದ್ದಾರೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ 56 ವರ್ಷ ಪ್ರಾಯದ ರಾವತ್, ಮೂರನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ. 2007-12ರ ಅವಧಿಯಲ್ಲಿ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಅಮಿತ್ ಶಾಗೆ ಆಪ್ತರಾಗಿರುವ ರಾವತ್ ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉತ್ತರ ಪ್ರದೇಶದ ಮೇಲುಸ್ತುವಾರಿ ಹೊಂದಿದ್ದರು. ಬಿಜೆಪಿಗೆ ಉತ್ತರ ಪ್ರದೇಶದಲ್ಲಿ ಜಯಭೇರಿ ಬಾರಿಸಿತ್ತು.
ಕಳೆದ ವಿಧಾನಸಭಾ ಚುನಾವಣೆಗಳಲ್ಲಿ 70 ಕ್ಷೇತ್ರಗಳ ಪೈಕಿ ಬಿಜೆಪಿಯು 57 ಸ್ಥಾನಗಳನ್ನು ಪಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.