
ಚಾಮರಾಜನಗರ ಜೂನ್ 19: ಬೆಳೆದು ನಿಂತ ಸೂರ್ಯಕಾಂತಿ ಬೆಳೆ ಸೌಂದರ್ಯಕ್ಕೆ ಮಾರು ಹೋದ ಯುವಕರು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಹೊಲಕ್ಕೆ ಕಾಲಿಟ್ಟ ಯುವಕರು ಮನಬಂದಂತೆ ವರ್ತಿಸತೊಡಗಿದರು. ಇದನ್ನು ಕಂಡ ಹೊಲದ ಮಾಲೀಕ ದಯವಿಟ್ಟು ಬೆಳೆ ಹಾಳು ಮಾಡಬೇಡಿ ಎಂದಿದ್ದಾರೆ. ರೈತನ ಮಾತಿಗೆ ಕಿವಿಗೊಡದ ಯುವಕರು ಅವರ ಮೇಲೆಯೇ ಹಲ್ಲೆ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಭೀಮನಬೀಡು ಗ್ರಾಮದ ಬಳಿ ಜಮೀನಿನೊಳಗೆ ಸೆಲ್ಫಿ ತೆಗೆದುಕೊಳ್ಳಬೇಡಿ ಎಂದಿದ್ದಕ್ಕೆ ಯುವಕರ ಗುಂಪೊಂದು ಜಮೀನಿನ ಮಾಲೀಕನ ಮೇಲೆಯೇ ಹಲ್ಲೆ ನಡೆಸಿದೆ. ರಾಷ್ಟ್ರೀಯ ಹೆದ್ದಾರಿ 212 ರ ಬದಿಯ ಜಮೀನಿನಲ್ಲಿ ಬೆಳೆದಿರುವ ಸೂರ್ಯಕಾಂತಿ ಬೆಳೆಯ ನಡುವೆ ಪ್ರಯಾಣಿಕರು ಸೆಲ್ಫಿ ತೆಗೆದುಕೊಳ್ಳುವುದು ಒಂದು ರೀತಿಯಲ್ಲಿ ಕ್ರೇಜ್ ಆಗಿ ಹೋಗಿದೆ. ಪ್ರವಾಸಿಗರು ಇಲ್ಲಿ ರೈತರ ಜಮೀನಿನ ಬಳಿ ಫೋಟೋ ತೆಗೆದುಕೊಳ್ಳುವುದನ್ನು ರೂಢಿಯಠಾಗಿ ಮಾಡಿಕೊಂಡಿದ್ದಾರೆ.
ಅದೇ ರೀತಿ ಕೇರಳದಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ಯುವಕರ ಗುಂಪೊಂದು ಸೂರ್ಯಕಾಂತಿ ಬೆಳೆಯ ನಡುವೆ ಸೆಲ್ಫಿ ತೆಗೆದುಕೊಳ್ಳಲು ಜಮೀನಿಗೆ ನುಗ್ಗಿದೆ. ಈ ವೇಳೆ ಸೂರ್ಯಕಾಂತಿ ಬೆಳೆ ತುಳಿದು ಹಾಳಾಗುತ್ತದೆ ಎಂದು ಸೆಲ್ಫಿ ತೆಗೆದುಕೊಳ್ಳಲು ರೈತ ಬಸವಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಯುವಕರ ತಂಡ ರೈತ ಬಸವಣ್ಣ ನ ಮೇಲೆಯೇ ಮನಬಂದಂತೆ ಹಲ್ಲೆ ನಡೆಸಿದೆ. ವಿಷಯ ತಿಳಿದ ಗ್ರಾಮಸ್ಥರು ರೈತ ಬಸವಣ್ಣನ ಮೇಲೆ ಹಲ್ಲೆ ನಡೆಸಿದ ಯುವಕರನ್ನು ಹಿಡಿದು ಥಳಿಸಿ ಈ ಪೈಕಿ ಮೂವರು ಯುವಕರನ್ನು ಗುಂಡ್ಲುಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ ಉಳಿದ 7 ಮಂದಿ ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.