ಇಂದು ಭಾರತಕ್ಕೆ ಟ್ರಂಪ್ ಪುತ್ರಿ ಇವಾಂಕ

Published : Nov 28, 2017, 09:53 AM ISTUpdated : Apr 11, 2018, 01:03 PM IST
ಇಂದು ಭಾರತಕ್ಕೆ ಟ್ರಂಪ್ ಪುತ್ರಿ ಇವಾಂಕ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ  ಜಾಗತಿಕ  ಉದ್ಯಮಿಗಳ ಶೃಂಗಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ  ಇವಾಂಕ ಪಾಲ್ಗೊಳ್ಳುತ್ತಿದ್ದಾರೆ.  ಅಲ್ಲದೇ  ಬಳಿಕ  ಮುತ್ತಿನ ನಗರಿಯ  ತಾಜ್ ಫಲಕ್ನುಮಾ ಅರಮನೆಯಲ್ಲಿ ಪ್ರಧಾನಿ ಅವರೊಂದಿಗೆ ಔತಣಕೂಟಲ್ಲಿಯೂ ಭಾಗಿಯಾಗಲಿದ್ದಾರೆ.

ಹೈದರಾಬಾದ್(ನ.28): ಹೈದರಾಬಾದ್'ನಲ್ಲಿ ಇಂದಿನಿಂದ ಆರಂಭವಾಗಲಿರುವ  ಮೂರು ದಿನಗಳ ಜಾಗತಿಕ ಉದ್ಯಮಿಗಳ ಶೃಂಗಸಭೆಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ  ಇವಾಂಕ ಟ್ರಂಪ್ ಇಂದು  ಭಾರತಕ್ಕೆ ಆಗಮಿಸುತ್ತಿದ್ದಾರೆ. ಟ್ರಂಪ್ ಅಮೆರಿಕ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಜಾಗತಿಕ ಕಾರ್ಯಕ್ರಮವೊಂದರಲ್ಲಿ ಇವಾಂಕ ಪಾಲ್ಗೊಳ್ಳುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ  ಜಾಗತಿಕ  ಉದ್ಯಮಿಗಳ ಶೃಂಗಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.  ಅಲ್ಲದೇ  ಬಳಿಕ  ಮುತ್ತಿನ ನಗರಿಯ  ತಾಜ್ ಫಲಕ್ನುಮಾ ಅರಮನೆಯಲ್ಲಿ ಪ್ರಧಾನಿ ಅವರೊಂದಿಗೆ ಔತಣಕೂಟಲ್ಲಿಯೂ ಭಾಗಿಯಾಗಲಿದ್ದಾರೆ. ಭಾರತದ ಪ್ರವಾಸ ಸಂದರ್ಭದಲ್ಲಿ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಗುರಿಯನ್ನೂ ಅವರು ಹೊಂದಿದ್ದಾರೆ.  ಈ  ಉದ್ಯಮಿಗಳ ಶೃಂಗ ಸಭೆಯಲ್ಲಿ 1500 ಮಂದಿ  ವಿವಿಧ ದೇಶದ ಪ್ರತಿಷ್ಠಿತ ಕಂಪನಿಗಳ ಸಿಇಒಗಳು, ಪ್ರಮುಖ  ಉದ್ಯಮಿಗಳು ಕೂಡ ಭಾಗವಹಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

PM Modi: ಮತ್ತೆ ದಕ್ಷಿಣದತ್ತ ಮುಖ ಮಾಡಿದ ಪ್ರಧಾನಿ: ರಾಜಕೀಯ ಮಹತ್ವ ಪಡೆದ ಮೋದಿ ನಡೆ
Delhi Air Quality: ನಿಬಂಧನೆಗಳು ಜಾರಿಯಲ್ಲಿದ್ರೂ ಪಾತಾಳಕ್ಕೆ ಕುಸಿದ ದೆಹಲಿ ವಾಯುಗುಣಮಟ್ಟ