ಉತ್ತರ ಪ್ರದೇಶದಲ್ಲಿ ಆಧಾರ್ ಇಲ್ಲದ್ದಕ್ಕೆ ಚಿಕಿತ್ಸೆ ನಕಾರ : ಆಸ್ಪತ್ರೆ ಗೇಟಿನ ಬಳಿ ಹೆರಿಗೆ

By Suvarna Web DeskFirst Published Feb 1, 2018, 8:51 AM IST
Highlights

ಆಧಾರ್ ಇಲ್ಲವೆಂಬ ಕಾರಣಕ್ಕೆ ಆಸ್ಪತ್ರೆ ಯೊಂದು ಚಿಕಿತ್ಸೆ ನಿರಾಕರಿಸಿದ ಪರಿಣಾಮ ಗರ್ಭಿಣಿಯೊಬ್ಬರು ಆಸ್ಪತ್ರೆಯ ಗೇಟಿನ ಬಳಿ  ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಖನೌ: ಆಧಾರ್ ಇಲ್ಲವೆಂಬ ಕಾರಣಕ್ಕೆ ಆಸ್ಪತ್ರೆ ಯೊಂದು ಚಿಕಿತ್ಸೆ ನಿರಾಕರಿಸಿದ ಪರಿಣಾಮ ಗರ್ಭಿಣಿಯೊಬ್ಬರು ಆಸ್ಪತ್ರೆಯ ಗೇಟಿನ ಬಳಿ  ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಂಬಂಧಿಕರು ಮಹಿಳೆಯನ್ನು ಇಲ್ಲಿನ ಶಹಗಂಜ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಾಗ, ಸಿಬ್ಬಂದಿ, ಆಧಾರ್ ಮತ್ತು ಬ್ಯಾಂಕ್ ಖಾತೆಯ ನಂಬರ್ ಕೇಳಿದ್ದಾರೆ.

ಅವು ಇಲ್ಲ ಎಂಬ ಕಾರಣಕ್ಕೆ ಆಕೆಯನ್ನು ದಾಖಲಿಸಿಕೊಳ್ಳಲು ಸಿಬ್ಬಂದಿ ನಿರಾಕರಿಸಿದ್ದಾರೆ. ಈ ನಡುವೆ ಮಹಿಳೆ ಆಸ್ಪತ್ರೆಯ ಗೇಟ್‌ಬಳಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

click me!