
ಚೆನ್ನೈ: ವಿವಿಧ ತಮಿಳಿನ ಧಾರಾವಾಹಿಗಳಲ್ಲಿ ನಟಿಸಿದ್ದ ಪ್ರಸಿದ್ಧ ಟಿವಿ ತಾರೆ ಪ್ರಿಯಾಂಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಲಸರ ಒಕ್ಕಮ್ ನಿವಾಸಕ್ಕೆ ಇಂದು ಬೆಳಗ್ಗೆ ಮನೆ ಕೆಲಸಕ್ಕೆ ಬಂದ ಕೆಲಸದಾಕೆಯಿಂದ ಈ ವಿಚಾರ ಬೆಳಕಿಗೆ ಬಂದಿದೆ.
ಮನೆಯ ಫ್ಯಾನ್ಗೆ ನೇಣು ಬಿಗಿದುಕೊಂಡು ಇಂದು ಬೆಳಗ್ಗೆ ಪ್ರಿಯಾಂಕ ಆತ್ಮಹತ್ಯೆಗೆ ಶರಣಾಗಿದ್ದಾರೆ.ತಮಿಳಿನ ವಂಶಮ್ ಧಾರಾವಾಹಿಯಲ್ಲಿ ಪ್ರಿಯಾಂಕ ನಟಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ರಮ್ಯ ಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದರು.
ಈಗಾಗಲೇ ಈ ಸಂಬಂಧ ತನಿಖೆ ಕೈಗೊಳ್ಳಲಾಗಿದ್ದು, ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಪ್ರಿಯಾಂಕ ವಿವಾಹವಾಗಿದ್ದು, ಪತಿ - ಪತ್ನಿಯರು ಭಿನ್ನಾಭಿಪ್ರಾಯವನ್ನು ಹೊಂದಿದ್ದರು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.