ಡಿಕೆಶಿ ಸ್ಟಿಂಗ್ ಪ್ರಕರಣ: ಟಿವಿ ವರದಿಗಾರರಿಗಿಲ್ಲ ಸುಪ್ರೀಂನಿಂದ ರಿಲೀಫ್

Published : Feb 14, 2017, 07:36 AM ISTUpdated : Apr 11, 2018, 01:01 PM IST
ಡಿಕೆಶಿ ಸ್ಟಿಂಗ್ ಪ್ರಕರಣ: ಟಿವಿ ವರದಿಗಾರರಿಗಿಲ್ಲ ಸುಪ್ರೀಂನಿಂದ ರಿಲೀಫ್

ಸಾರಾಂಶ

ಸ್ಥಳೀಯ ನ್ಯಾಯಾಲಯ ಹಾಗೂ ಹೈಕೋರ್ಟ್  ಪ್ರಕರಣವನ್ನು ವಜಾಗೊಳಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಮೊರೆ ಹೋಗಿದ್ದರು.

ನವದೆಹಲಿ(ಫೆ.14): ಕರ್ನಾಟಕ ಇಂಧನ ಸಚಿವ ಡಿ.ಕೆ.‌ಶಿವಕುಮಾರ್ ವಿರುದ್ಧ ರಹಸ್ಯ ಕಾರ್ಯಾಚರಣೆ ನಡೆಸಲು ಹೋಗಿ ಬಂಧನಕ್ಕೊಳಗಾಗಿದ್ದ ಸ್ಥಳೀಯ ಕನ್ನಡವಾಹಿನಿಯೊಂದರ ಇಬ್ಬರು ವರದಿಗಾರರು ಹಾಗೂ ಟಿವಿ ಸಂಸ್ಥೆಯ ನಿರ್ದೇಶಕ ವಿಚಾರಣೆ ಎದುರಿಸಲೇಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಾರ್ಚ್ 2014ರಲ್ಲಿ ಉದ್ಯಮಿಗಳ ಸೋಗಿನಲ್ಲಿ ಸಚಿವ ಶಿವಕುಮಾರ್ ಅವರನ್ನು ಭೇಟಿಯಾಗಿ, ಲಂಚದ ಅಮಿಷವೊಡ್ಡಿ‌ ಭ್ರಷ್ಟಾಚಾರವನ್ನು ಹೊರಗೆಳೆಯುವ ರಹಸ್ಯ ಕಾರ್ಯಾಚರಣೆ ವಿಫಲವಾಗಿ ವರದಿಗಾರರ ಮೇಲೆ ಪ್ರಕರಣ ದಾಖಲಾಗಿತ್ತು. ಸ್ಥಳೀಯ ನ್ಯಾಯಾಲಯ ಹಾಗೂ ಹೈಕೋರ್ಟ್  ಪ್ರಕರಣವನ್ನು ವಜಾಗೊಳಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಮೊರೆ ಹೋಗಿದ್ದರು.

ಇದೇವೇಳೆ ರಹಸ್ಯ ಕಾರ್ಯಾಚರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾ. ಆದರ್ಶ್ ಕುಮಾರ್ ಗೋಯಲ್ ಹಾಗೂ ನ್ಯಾ. ಯು. ಯು. ಲಲಿತ್ ಅವರನ್ನೊಳಗೊಂಡ ಪೀಠವು, ಸ್ಟಿಂಗ್ ಆಪರೇಶನ್'ಗಳಿಗೆ ಕೆಲವು ನಿಯಮಗಳನ್ನು ರೂಪಿಸುವ ಅಗತ್ಯವಿದೆ ಹಾಗೂ ಪ್ರಕ್ರಿಯೆಯಲ್ಲಿ ಪೊಲೀಸ್ ಅಧಿಕಾರಿಗಳು ಅಥವಾ ಇನ್ನಿತರ ಕಾನೂನು ಜಾರಿಗೊಳಿಸುವ ಸಂಸ್ಥೆಗಳ ಅಧಿಕಾರಿಗಳನ್ನು ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಬೇಕೆಂದು ಅಭಿಪ್ರಾಯಪಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?