
ಬೆಂಗಳೂರು(ಆ.27): ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಮತ್ತು ರಾಮ್ ರಹೀಂ ಸಿಂಗ್ ಶಿಕ್ಷೆ ಪ್ರಕರಣವು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ಸಿನ ಮಾಜಿ ಸಂಸದೆ ರಮ್ಯಾ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ.
ಈ ಪ್ರಕರಣವನ್ನು ಮುಂದಿಟ್ಟುಕೊಂಡು ಉಭಯ ನಾಯಕರು ಶನಿವಾರ ಟ್ವೀಟರ್‌ನಲ್ಲಿ ವಾಕ್ಸಮರ ನಡೆಸಿದ್ದಾರೆ.ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಆರೋಪ ಸಾಬೀತಾದ ಬಳಿಕ ಹರಿಯಾಣದಲ್ಲಿ ಗಲಭೆಯಾಗಿದೆ. ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ.
ಆದರೂ, ಪ್ರಧಾನಿ ನರೇಂದ್ರ ಮೋದಿ ಅವರು ಹರಿಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್ ಕಟ್ಟರ್ ಅವರ ರಾಜೀನಾಮೆ ಕೇಳುತ್ತಿಲ್ಲ ಎಂದು ಮಾಜಿ ಸಂಸದೆ ರಮ್ಯಾ ಅವರು ಟ್ವೀಟರ್‌ನಲ್ಲಿ ಬಿಜೆಪಿಗೆ ಚಾಟಿ ಬೀಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಂಸದ ಪ್ರತಾಪ್ ಸಿಂಹ ಅವರು, ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಯಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಆರೋಪ ಇದೆ. ಜಾರ್ಜ್ ಅವರ ರಾಜೀನಾಮೆ ಪಡೆದುಕೊಳ್ಳುವಂತೆ ಮುಖ್ಯಮಂತ್ರಿಗಳನ್ನು ಯಾಕೆ ನೀವು ಕೇಳುತ್ತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.