
ಮಂಗಳೂರು(ಮೇ 31): ಚರ್ಚ್ ದಾಳಿ ಹೆಸರಿನಲ್ಲಿ ಸುಳ್ಳು ಸಂದೇಶ ರವಾನಿಸುತ್ತಿದ್ದ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸುನೀಲ್ ವೇಗಸ್ (34) ಮತ್ತು ಸಚಿತ್ ಪಿ.ಪಿ (23) ಬಂಧಿತರು.
ಎನ್.ಆರ್. ಪುರ ನಿವಾಸಿಗಳಾದ ಇವರಿಬ್ಬರು ಚರ್ಚ್ ದಾಳಿಯ ಕುರಿತು ಸುಳ್ಳು ವದಂತಿ ಹಬ್ಬಿಸುತ್ತಿದ್ದರು ಎನ್ನಲಾಗಿದೆ. ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ತಂಡ ಕಾರ್ಯಾಚರಣೆ ನಡೆಸಿ ಇವರಿಬ್ಬರನ್ನು ಬಂಧಿಸಿದೆ. ಇವರಿಬ್ಬರು ಹಳೆಯ ವಿಡಿಯೋಗಳನ್ನು ಹರಿಬಿಟ್ಟು ಮಂಗಳೂರನಲ್ಲಿ ಮತ್ತೆ ಚರ್ಚ್ ದಾಳಿ ಆರಂಭವಾಗಿದೆ ಎಂದು ಸುಳ್ಳು ವದಂತಿ ಹಬ್ಬಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ರೀತಿ ಸುಳ್ಳು ಸುದ್ದಿ ಹರಡಿ ಕೋಮು ಸಾಮರಸ್ಯ ಕದಡಲು ಹುನ್ನಾರ ನಡೆಸಿದ್ದಾಗಿ ಇಬ್ಬರೂ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಇನ್ನಷ್ಟು ಇಂತಹ ವದಂತಿಗಳನ್ನು ಹರಡುವ ಯೋಜನೆ ಕೂಡ ರೂಪಿಸಿದ್ದಾಗಿ ಇಬ್ಬರೂ ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.