
ಬೆಂಗಳೂರು, [ಅ.30]: ಕರ್ನಾಟಕ ವಿಧಾನಪರಿಷತ್ ಗೆ ನಡೆಯಬೇಕಿರುವ ಮೂರು ನಾಮನಿರ್ದೇಶನ ಸದಸ್ಯರ ಪೈಕಿ 2 ಸ್ಥಾನಕ್ಕೆ ಇಂದು [ಮಂಗಳವಾರ] ನಾಮನಿರ್ದೇಶನ ಮಾಡಲಾಗಿದೆ.
ರಾಜ್ಯಪಾಲರು ಕಾಂಗ್ರೆಸ್ನ ಇಬ್ಬರು ಸದಸ್ಯರನ್ನ ಪರಿಷತ್ ಸ್ಥಾನಕ್ಕೆ ನೇಮಕಗೊಳಿಸಿದ್ದಾರೆ. ಕಾಂಗ್ರೆಸ್ ಸದಸ್ಯರಾದ ಯು.ಬಿ ವೆಂಕಟೇಶ್ ಹಾಗೂ ಪ್ರಕಾಶ್ ರಾಥೋಡ್ರನ್ನು ನಾಮನಿರ್ದೇಶಿಸಿ ರಾಜ್ಯಪಾಲ ವಜೂಭಾಯ್ ವಾಲಾ ಆದೇಶ ಹೊರಡಿಸಿದ್ದಾರೆ.
ಒಟ್ಟು ಮೂರು ಸದಸ್ಯರನ್ನ ವಿಧಾನಪರಿಷತ್ ಗೆ ನಾಮನಿರ್ದೇಶನ ಮಾಡಲಾಗುತ್ತದೆ. ಇದರಲ್ಲಿ ಕಾಂಗ್ರೆಸ್ ಎರಡು ಸ್ಥಾನ ಪಡೆದುಕೊಂಡಿದ್ದು, ಇನ್ನೊಂದು ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.
ಆದರೆ, ಇನ್ನು ಜೆಡಿಎಸ್ ಕಡೆಯಿಂದ ಯಾರು ನಾಮನಿರ್ದೇಶನಗೊಳ್ಳುತ್ತಾರೆ ಎನ್ನುವುದು ಇನ್ನೂ ತೀರ್ವನವಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.