ಜಮ್ಮು ಕಾಶ್ಮೀರದಲ್ಲಿ ಜೈಶ್ ಸಂಘಟನೆಯ ಇಬ್ಬರು ಟಾಪ್ ಉಗ್ರರು ಹತ

By Web DeskFirst Published Feb 23, 2019, 1:40 PM IST
Highlights

ಜಮ್ಮು ಕಾಶ್ಮೀರದಲ್ಲಿ ಜೈಶ್ ಉಗ್ರರು ದಾಳಿ ನಡೆಸಿ 44 ಯೋಧರು ಹುತಾತ್ಮರಾದ ಬೆನ್ನಲ್ಲೇ ಸೇನಾ ಪಡೆ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. 

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಸೋಪೊರೆ ಸೆಕ್ಟರ್ ನಲ್ಲಿ  ಉಗ್ರರು ಹಾಗೂ ಭಾರತೀಯ ಸೇನೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಜೈಶ್ ಇ ಮೊಹಮ್ಮದ್ ಸಂಘಟನೆಯ ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ. 

ಆದರೆ ಈ ಕಾಳಗದಲ್ಲಿ ಭಾರತೀಯ ಸೇನೆಗೆ ಯಾವುದೇ ರೀತಿ ಹಾನಿಯುಂಟಾಗಿಲ್ಲವೆಂದು ದಕ್ಷಿಣ ಕಾಶ್ಮೀರದ ಡಿಐಜಿ ಅತುಲ್ ಕುಮಾರ್ ಗೋಯಲ್ ಹೇಳಿದ್ದಾರೆ. 

ಇಬ್ಬರು ಜೈಶ್ ಇ ಮೊಹಮ್ಮದ್ ಸಂಘಟನೆಯ ಪ್ರಮುಖ ಉಗ್ರರನ್ನೇ ಹತ್ಯೆ ಮಾಡಲಾಗಿದೆ.  ಹತರಾದ ಉಗ್ರರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ ಎಂದು ಡಿಐಜಿ ಹೇಳಿದ್ದಾರೆ. 

ಅಲ್ಲದೇ ಉಗ್ರರು ಹತರಾದ ಸ್ಥಳದಿಂದ ವಿವಿಧ ರೀತಿಯ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.  

ಪುಲ್ವಾಮದಲ್ಲಿ ಜೈಶ್ ಇ ಮೊಹಮ್ಮದ್ ಸಂಘಟನೆ ಉಗ್ರರ ದಾಳಿಯಿಂದ 44 ಯೋಧರು ಹುತಾತ್ಮರಾದ ಬೆನ್ನಲ್ಲೇ ಭಾರತೀಯ ಸೇನೆಯಿಂದ ಉಗ್ರರ ಹುಟ್ಟಡಗಿಸುವ ಯತ್ನ ನಿರಂತರವಾಗಿ ನಡೆಯುತ್ತಿದೆ. ಕಾಶ್ಮೀರದ ಗಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಗ್ರರು ಅಡಗಿರುವ ಶಂಕೆ ಇದ್ದು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. 

click me!