
ಶ್ರೀನಗರ: ಶ್ರೀನಗರದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆಯೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರದ ಕರಣ್ ನಗರ ಪ್ರದೇಶದಲ್ಲಿ ಕಟ್ಟಡವೊಂದರಲ್ಲಿ ಉಗ್ರರು ಅವಿತಿದ್ದರು ಎನ್ನಲಾಗಿದೆ.
ನಿನ್ನೆ ಸಿಆರ್’ಪಿಎಫ್ ಕ್ಯಾಂಪ್ ಮೇಲೆ ದಾಳಿ ನಡೆಸಲು ಉಗ್ರರು ಯತ್ನಿಸಿದ ಬೆನ್ನಲ್ಲೇ ಭದ್ರತಾ ಸಿಬ್ಬಂದಿ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಗಿತ್ತು.
ಹತರಾದ ಉಗ್ರರ ಬಗ್ಗೆ ಯಾವುದೇ ಮಾಹಿತಿಗಳು ಈವರಗೆ ಲಭ್ಯವಾಗಿಲ್ಲ. ಉಗ್ರರು ಕರಣ್ ನಗರದ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಅವಿತುಕೊಂಡಿದ್ದರು, ಎಂದು ಅಧಿಕಾರಿಗಳು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ಜಮ್ಮುವಿನ ಸುಂಜುವಾನ್’ನಲ್ಲಿ ಜೈಶೆ ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರರು ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದರು. ದಾಳಿಯಲ್ಲಿ 6 ಯೋಧರು ಸೇರಿದಂತೆ 7 ಮಂದಿ ಹುತಾತ್ಮರಾಗಿದ್ದರು. ಸೇನೆಯ ಪ್ರತಿದಾಳಿಗೆ ಮೂವರು ಉಗ್ರರು ಹತರಾಗಿದ್ದರು.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.