
ದುಬೈ[ಏ.05]: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದುಬೈನ ಅತ್ಯುನ್ನತ ನಾಗರಿಕ ಗೌರವಾದ ‘ಜಾಯೇದ್ ಪದಕ’ವನ್ನು ಗುರುವಾರ ಘೋಷಿಸಲಾಗಿದೆ. ಅರಬ್ ಸಂಯುಕ್ತ ರಾಷ್ಟ್ರಗಳ ಜೊತೆಗಿನ ದ್ವಿಪಕ್ಷೀಯ ಸಂಬಂಧ ಸುಧಾರಣೆಗಾಗಿ ರಾಜರು, ವಿವಿಧ ದೇಶಗಳ ಅಧ್ಯಕ್ಷರು ಮತ್ತು ಪ್ರಧಾನಿಗಳಿಗೆ ಪ್ರದಾನ ಮಾಡಲಾಗುವ ಈ ಗೌರವವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘೋಷಿಸಲಾಗಿದೆ ಎಂದು ಅರಬ್ ಅಧ್ಯಕ್ಷ ಶೇಖ್ ಖಲಿಫಾ ಬಿನ್ ಝಯೆದ್ ಅಲ್ ನಹ್ಯಾನ್ ಅವರು ತಿಳಿಸಿದರು.
ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಅಬುದಾಬಿಯ ರಾಜಕುಮಾರ ಮೊಹಮ್ಮದ್ ಬಿನ್ ಝಾಯೆದ್ ಅವರು, ‘ಭಾರತದ ಜೊತೆ ನಾವು ಐತಿಹಾಸಿಕವಾಗಿ ಉತ್ತಮ ಬಾಂಧವ್ಯ ಹೊಂದಿದ್ದೇವೆ. ಅದನ್ನು ಮತ್ತಷ್ಟುಗಟ್ಟಿಗೊಳಿಸುವಲ್ಲಿ ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮಿಸಿದ್ದಾರೆ. ಇದಕ್ಕಾಗಿಯೇ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿ ಘೋಷಿಸಲಾಗಿದೆ,’ ಎಂದು ಹೇಳಿದರು.
ಭಾರತ ದೇಶದ ಹೆಮ್ಮೆಯ ಪುತ್ರನಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಾಯೇದ್ ಪದಕ ಘೋಷಣೆ ಮಾಡಿರುವುದು ನಿಜಕ್ಕೂ ಸಂತಸ ತಂದಿದೆ. ಅರಬ್‌ನ ಈ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ವಿಇದೇಶಾಗಂ ಸಚಿವೆ ಸುಷ್ಮಾ ಸ್ವರಾಜ್ ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.