
ನವದೆಹಲಿ (ಫೆ.22): ಕೆಲಸದಲ್ಲಿ ವೇಳೆ ತಾರತಮ್ಯ ಮಾಡುತ್ತಿದ್ದರು ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಉಬರ್ ಸಂಸ್ಥೆಯ ಮಾಜಿ ಮಹಿಳಾ ಉದ್ಯೋಗಿಯೊಬ್ಬರು ಆರೋಪಿಸಿದ ಹಿನ್ನೆಲೆಯಲ್ಲಿ ಸಂಸ್ಥೆಯ ಸಿಇಓ ಟ್ರಾವಿಸ್ ಕಲಾನಿಕ್ ಕ್ಷಮೆಯಾಚಿಸಿದ್ದಾರೆ.
ಕಂಪನಿ ಉದ್ಯೋಗಿಗಳಲ್ಲಿರುವ ವೈವಿಧ್ಯತೆಯ ಕೊರತೆ, ಸಿಬ್ಬಂದಿಗಳ ದೂರುಗಳಿಗೆ ಸರಿಯಾಗಿ ಸ್ಪಂದಿಸದೇ ಇರುವುದಕ್ಕೆ, ಸಂಸ್ಥೆಯ ಧ್ಯೇಯೋಧ್ಯೇಶ ವಿಫಲವಾಗಿರುವುದಕ್ಕೆ ಕಂಪನಿ ಸಿಇಓ ಕಣ್ಣಲ್ಲಿ ನೀರು ತುಂಬಿಕೊಂಡು ವಿಷಾದ ವ್ಯಕ್ತಪಡಿಸಿದ್ದಾರೆ.
ಬದಲಾವಣೆ ಒಮ್ಮೆಗೆ ಆಗುವುದಿಲ್ಲ. ಎಲ್ಲಿ ತಪ್ಪಾಗಿದೆ ಎಂದು ತಿಳಿದು ಸರಿಪಡಿಸುವುದಕ್ಕೆ ಸಮಯಾವಕಾಶ ಹಿಡಿಯುತ್ತದೆ. ಉಬರ್ ಅನ್ನು ಉತ್ತಮಪಡಿಸುವುದರ ಜೊತೆಗೆ ಉದ್ಯಮದಲ್ಲಿ ಮಹಿಳಾ ಅಭಿವೃದ್ಧಿಗೂ ಶ್ರಮಿಸಲಿದ್ದೇವೆ ಎಂದು ಟ್ರಾವಿಸ್ ಕಲಾನಿಕ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.