ರಾಮಮಂದಿರ ಕಟ್ಟದಿದ್ದರೆ ಮೋದಿ ಸರ್ಕಾರ ಪತನ: ಉದ್ಧವ್‌ ಠಾಕ್ರೆ

Published : Nov 26, 2018, 09:26 AM IST
ರಾಮಮಂದಿರ ಕಟ್ಟದಿದ್ದರೆ ಮೋದಿ ಸರ್ಕಾರ ಪತನ: ಉದ್ಧವ್‌ ಠಾಕ್ರೆ

ಸಾರಾಂಶ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ಆಗ್ರಹಪಡಿಸಲು ಅಯೋಧ್ಯೆ ಪ್ರವಾಸ ಕೈಗೊಂಡಿರುವ ಉದ್ಧವ್‌ ವಿವಾದಿತ ರಾಮಜನ್ಮಭೂಮಿ ಸ್ಥಳಕ್ಕೆ ಭೇಟಿ ನೀಡಿ ತಾತ್ಕಾಲಿಕ ರಾಮಮಂದಿರದಲ್ಲಿರುವ ರಾಮಲಲ್ಲಾನ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು, ‘ಮಂದಿರ ನಿರ್ಮಾಣ ನೋಡಲಾಗದೇ ಅನೇಕ ತಲೆಮಾರುಗಳು ಗತಿಸಿ ಹೋದವು. ದಿನಗಳು, ವರ್ಷಗಳು ಉರುಳಿದವು’ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ನವದೆಹಲಿ[ನ.26]: ರಾಮಮಂದಿರ ನಿರ್ಮಾಣ ಮಾಡದೇ ಹೋದರೆ ಕೇಂದ್ರದ ಬಿಜೆಪಿ ಸರ್ಕಾರ ಬಹುಕಾಲ ಬಾಳಲಿಕ್ಕಿಲ್ಲ ಎಂದು ಶಿವಸೇನೆ ನಾಯಕ ಉದ್ಧವ್‌ ಠಾಕ್ರೆ ಗುಡುಗಿದ್ದಾರೆ. ಮಂದಿರ ನಿರ್ಮಾಣಕ್ಕೆ ಶೀಘ್ರ ಸುಗ್ರೀವಾಜ್ಞೆ ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ಆಗ್ರಹಪಡಿಸಲು ಅಯೋಧ್ಯೆ ಪ್ರವಾಸ ಕೈಗೊಂಡಿರುವ ಉದ್ಧವ್‌ ಭಾನುವಾರ ವಿವಾದಿತ ರಾಮಜನ್ಮಭೂಮಿ ಸ್ಥಳಕ್ಕೆ ಭೇಟಿ ನೀಡಿ ತಾತ್ಕಾಲಿಕ ರಾಮಮಂದಿರದಲ್ಲಿರುವ ರಾಮಲಲ್ಲಾನ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು, ‘ಮಂದಿರ ನಿರ್ಮಾಣ ನೋಡಲಾಗದೇ ಅನೇಕ ತಲೆಮಾರುಗಳು ಗತಿಸಿ ಹೋದವು. ದಿನಗಳು, ವರ್ಷಗಳು ಉರುಳಿದವು’ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣಕ್ಕೆ ಹೊರಟ ಶಿವ ಸೇನೆ

ಹಾಗಾಗಿ ಈಗ ಸರ್ಕಾರದ ಈಗಿನ ಅವಧಿ ಮುಗಿಯಲು ಕೆಲವೇ ತಿಂಗಳು ಬಾಕಿ ಇದ್ದು, ಒಂದು ಅಧಿವೇಶನ ಮಾತ್ರ ನಡೆಯಲು ಬಾಕಿ ಇದೆ. ಈ ಕೂಡಲೇ ಮಂದಿರ ನಿರ್ಮಾಣಕ್ಕೆ ಅಧ್ಯಾದೇಶ ಹೊರಡಿಸಬೇಕು. ಶಿವಸೇನೆ ಇದನ್ನು ಬೆಂಬಲಿಸಲಿದೆ’ ಎಂದಿದ್ದಾರೆ.

ಇದನ್ನೂ ಓದಿ: ಹಿಂದೂಗಳಿಗೇನಾದ್ರೂ ಮಾಡ್ರಿ: ಮೋದಿಗೆ ಗದರಿದ ಠಾಕ್ರೆ!

‘ಬಿಜೆಪಿಯವರು ಚುನಾವಣಾ ಸಭೆಗಳಲ್ಲಿ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಎಲ್ಲ ಸಾಧ್ಯಾಸಾಧ್ಯತೆಗಳನ್ನು ಸಂವಿಧಾನಕ್ಕೆ ಅನುಗುಣವಾಗಿ ಪರಿಶೀಲಿಸುತ್ತೇವೆ ಎನ್ನುತ್ತಾರೆ. ಹಾಗಿದ್ದರೆ ಇಷ್ಟುವರ್ಷ ಸಂವಿಧಾನದಲ್ಲಿ ಏನನ್ನು ನೀವು ಪರಿಶೀಲಿಸಿದಿರಿ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎನ್ ಡಿಎ ಬಣ ಬಿಟ್ಟು - ಯುಪಿಎಯತ್ತ ಶಿವಸೇನಾ ಒಲವು..?

ಮಂದಿರ ನಿರ್ಮಾಣವಾಗದೇ ಹೋದರೆ ಬಿಜೆಪಿ ಸರ್ಕಾರ ಪತನಗೊಳ್ಳಬಹುದು. ಆದರೆ ಮಂದಿರ ನಿರ್ಮಾಣವಾಗಿಯೇ ತೀರುತ್ತದೆ ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬ್ಯಾಗಲ್ಲಿ ಹೃದಯ ಇಟ್ಕೊಂಡು ಓಡಾಟ: ನೈಸರ್ಗಿಕ ಹೃದಯ ಇಲ್ಲದೇ ಬದುಕುಳಿದಿರುವ ಜಗತ್ತಿನ ಏಕೈಕ ಮಹಿಳೆ ಈಕೆ
ಕೇವಲ 2 ನಿಮಿಷ ಮಗಳ ನೋಡಲು 11ಗಂಟೆಗೆ ಸ್ಟೇಶನ್‌ಗೆ ಬಂದ ತಂದೆ, ಭಾವುಕ ಕ್ಷಣದ ವಿಡಿಯೋ