ಬೆಂಗಳೂರು ಏರ್ಪೋರ್ಟ್‌ಗೆ ‘ಬಾಂಬ್’: ಉಡುಪಿ ಮೂಲದ ಇಂಜಿನಿಯರ್ ಬಂಧನ

By Web DeskFirst Published Aug 30, 2018, 11:34 AM IST
Highlights
  • ಕಳೆದ 15 ದಿನಗಳಲ್ಲಿ ಏರ್ಪೋರ್ಟ್‌ಗೆ ಎರಡು ಬಾರಿ  ಕರೆ ಮಾಡಿ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ
  • ವಿಚಾರಣೆ ವೇಳೆ ಬೆಂಗಳೂರು ಸಿಟಿ ರೈಲ್ವೇ ಸ್ಟೇಷನ್‌ಗೂ ಬೆದರಿಕೆ ಕರೆ ಮಾಡಿರುವ ವಿಚಾರ ಬಯಲಿಗೆ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋಟ್ ಮತ್ತು ಸಿಟಿ ರೈಲ್ವೇ ನಿಲ್ದಾಣವನ್ನು ಸ್ಫೋಟಿಸುವುದಾಗಿ ಹುಸಿ ಬಾಂಬ್ ಕರೆ ಮಾಡಿದ್ದ ಉಡುಪಿ ಮೂಲದ ಇಂಜಿನಿಯರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿಯ ಮಣಿಪಾಲ ಮೂಲದ ಆದಿತ್ಯ ರಾವ್ (34) ಬಂಧಿತ ಆರೋಪಿ. ಕಳೆದ 15 ದಿನಗಳಲ್ಲಿ ಎರಡು ಬಾರಿ ಟರ್ಮಿನಲ್ ಮ್ಯಾನೇಜರ್‌ಗೆ ಕರೆ ಮಾಡಿ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಿದ್ದನು.

ಕಳೆದ ಎರಡು ದಿನಗಳಿಂದಷ್ಟೆ ಪಾರ್ಕಿಂಗ್ ಜಾಗ ಸ್ಪೋಟಿಸುವುದಾಗಿ ಇ-ಮೇಲ್ ಮಾಡಿದ್ದ ಆದಿತ್ಯರಾವ್, ಜೊತೆಗೆ ಸಿಟಿ ರೈಲ್ವೆ ಸ್ಟೇಷನ್ ನಲ್ಲೂ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದ.

ಆರೋಪಿ ವಿಚಾರಣೆ ವೇಳೆ ಬೆಂಗಳೂರು ಸಿಟಿ ರೈಲ್ವೇ ಸ್ಟೇಷನ್ ಗೂ ಬೆದರಿಕೆ ಕರೆ ಮಾಡಿದ್ದು ನಾನೇ ಅಂತಾ ತಪ್ಪೊಪ್ಪಿಕೊಂಡಿದ್ದಾನೆ. 

ಬಿ.ಇ., ಎಂಬಿಎ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಆದಿತ್ಯ ರಾವ್,  ಕೆಲ ತಿಂಗಳ ಹಿಂದೆ  ಕೆಐಎಎಲ್ ನಲ್ಲಿ ಕೆಲಸಕ್ಕೆ ಸೇರಿದ್ದ.  ಅಲ್ಲಿನ ಅಧಿಕಾರಿಗಳು ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಕೆಲಸ ಬಿಟ್ಟಿದ್ದ.

ಇದೇ ಕೋಪಕ್ಕೆ ಬೆದರಿಕೆ ಕರೆ ಮಾಡಿದ್ದಾಗಿ ಆತ ಹೇಳಿಕೆ ನೀಡಿದ್ದಾನೆ.  ಸದ್ಯ ಕೆಐಎಎಲ್ ಪೊಲೀಸರಿಂದ ಆದಿತ್ಯ ರಾವ್‌ನ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

click me!