
ಉಡುಪಿ: ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಅಮೆರಿಕದ ನ್ಯೂಜೆರ್ಸಿಯಲ್ಲಿ ಚಚ್‌ರ್‍ವೊಂದನ್ನು ಖರೀದಿಸಿ ಕಡೆಗೋಲು ಕೃಷ್ಣನ ದೇವಸ್ಥಾನವನ್ನು ನಿರ್ಮಿಸಿದ್ದು, ಅದರಲ್ಲಿ ಸಾಲಿಗ್ರಾಮ ಶಿಲೆಯ ಕೃಷ್ಣನ ವಿಗ್ರಹದ ಸ್ಥಾಪನೆಗೆ ಕ್ಷಣಗಣನೆ ಆರಂಭಗೊಂಡಿದೆ.
ಕ್ರೈಸ್ತ ದೇವಾಲಯವೊಂದು ಸುಂದರವಾದ ಹಿಂದೂ ದೇವಾಲಯವಾಗಿರುವುದು ವಿಶ್ವದಲ್ಲೇ ಇದೇ ಮೊದಲು ಎನ್ನಬಹುದು ಎಂದು ಮಠದ ಪ್ರಕಟಣೆ ತಿಳಿಸಿದೆ. ಇಲ್ಲಿ ಹೊಸ ಕಟ್ಟಡಗಳನ್ನು ಕಟ್ಟುವುದಕ್ಕೆ ಭೂಮಿಯ ಲಭ್ಯತೆ ಬಹಳ ಕಡಿಮೆ ಇದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿದ್ದ ಹಳೆಯ ದೊಡ್ಡದಾದ ಕ್ರೈಸ್ತ ದೇವಾಲಯವನ್ನು ಖರೀದಿಸಿ, ಕಟ್ಟಡಕ್ಕೆ ಯಾವುದೇ ತೊಂದರೆಯಾಗದಂತೆ ಜಾಣ್ಮೆಯಿಂದ ಅದನ್ನೇ ಕೃಷ್ಣನ ದೇವಾಲಯವನ್ನಾಗಿ ಪರಿವರ್ತನೆ ಮಾಡಲಾಗಿದೆ.
ದೇವಾಲಯ ಮತ್ತು ಸುತ್ತಲು ಒಟ್ಟು 4.5 ಎಕರೆ ಭೂಮಿ ಇದ್ದು, 600 ಕಾರುಗಳನ್ನು ಪಾರ್ಕ್ ಮಾಡುವುದಕ್ಕೆ ಅವಕಾಶವಿದೆ. ಬೃಹತ್ ದೇವಾಲಯದೊಳಗೆ 1000 ಜನ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.