
ಲಂಡನ್: 9,000 ಕೋಟಿ ರು. ಸಾಲ ಪಡೆದು ವಂಚಿಸಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಂದ ಭಾರತದ ಬ್ಯಾಂಕ್‌ಗಳು ಆಸ್ತಿ ವಶಕ್ಕೆ ಪಡೆಯಲು ಅನುವು ಮಾಡಿಕೊಡುವ ನೆರವಾಗುವ ಜಾರಿ ಆದೇಶವೊಂದನ್ನು ಬ್ರಿಟನ್‌ನ ಹೈಕೋರ್ಟ್ ಹೊರಡಿಸಿದೆ. ಭಾರತದ 13 ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಪರವಾಗಿ ಈ ಆದೇಶ ಹೊರಡಿಸಲಾಗಿದೆ.
ಹೀಗಾಗಿ ಅಗತ್ಯ ಬಿದ್ದಲ್ಲಿ ಅಧಿಕಾರಿಗಳು ಮಲ್ಯ ವಾಸವಾಗಿರುವ ಲಂಡನ್‌ನ ಹರ್ಟ್‌ಫೋರ್ಡ್‌ಶೈರ್‌ನಲ್ಲಿರುವ ಮಲ್ಯರ ಮನೆ ಸೇರಿದಂತೆ ಅವರ ಆಸ್ತಿ ಇರುವ ಪ್ರದೇಶಗಳನ್ನು ಪ್ರವೇಶಿಸಬಹುದಾಗಿದೆ. ಈ ಮೂಲಕ ಆಸ್ತಿ ವಶಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಜೂನ್ 26ರ ಆದೇಶದಲ್ಲಿ ಹೈಕೋರ್ಟ್ ತಿಳಿಸಿದೆ.
ಹಾಗೆಂದು ಇದು, ಮಲ್ಯರ ಮನೆ ಪ್ರವೇಶಿಸಿ ಅವರ ಆಸ್ತಿ ವಶಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸುವ ಆದೇಶವಲ್ಲ. ಈ ಆದೇಶವನ್ನು ಬಳಸಿಕೊಂಡು ಅಧಿಕಾರಿಗಳು ಆಸ್ತಿ ವಶಕ್ಕೆ ಪ್ರಯತ್ನಿಸಬಹುದು. ಹೀಗಾಗಿ ಬ್ಯಾಂಕ್‌ಗಳು ಈ ಅವಕಾಶವನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.