ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶ ಮಾಡದಿರಲು ವಿಶ್ವಸಂಶ್ಥೆ ಪ್ರಧಾನ ಕಾರ್ಯದರ್ಶಿ ನಿರ್ಧಾರ| ವಿಶ್ವಸಂಶ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸ್ಪಷ್ಟನೆ| ಎರಡೂ ರಾಷ್ಟ್ರಗಳು ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದ ಗುಟೆರೆಸ್| ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉಲ್ಭಣಗೊಳ್ಳುವ ಆತಂಕ ವ್ಯಕ್ತಪಡಿಸಿದ ಗುಟೆರೆಸ್| ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲಿರುವ ಮೋದಿ, ಇಮ್ರಾನ್ ಖಾನ್|
ವಿಶ್ವಸಂಸ್ಥೆ(ಸೆ11): ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಪಾಕಿಸ್ತಾನ ನಡುವೆ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ವಿಶ್ವಸಂಶ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸ್ಪಷ್ಟಪಡಿಸಿದ್ದಾರೆ.
ಕಾಶ್ಮೀರ ವಿಚಾರಕ್ಕೆಸಂಬಂಧಿಸಿದಂತೆ ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉಲ್ಭಣಗೊಳ್ಳುವ ಆತಂಕವಿದೆ ಎಂದಿರುವ ಗುಟೆರೆಸ್, ಎರಡೂ ರಾಷ್ಟ್ರಗಳು ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
undefined
ಯಾವುದೇ ಕಾರಣಕ್ಕೂ ಕಾಶ್ಮೀರ ವಿವಾದದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ, ಮಧ್ಯಪ್ರವೇಶ ಕೋರಿ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಶಾಶ್ವತ ಪ್ರತಿನಿಧಿ ಮಲೀಹಾ ಲೋದಿ ಮಾಡಿದ್ದ ಮನವಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ.
ಈ ತಿಂಗಳಾಂತ್ಯಕ್ಕೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ನಡೆಯಲಿದ್ದು ಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಾಗವಹಿಸಲಿದ್ದಾರೆ.