
ಲಖನೌ[ಆ.24]: ಶಾಲೆಯಲ್ಲಿ ಮಕ್ಕಳು ಹಸಿದುಕೊಂಡು ಇರಬಾರದು. ಅವರಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬ ಕಾರಣಕ್ಕೆ ಸರ್ಕಾರ ಮಧ್ಯಾಹ್ನ ಬಿಸಿಯೂಟ ಯೋಜನೆ ಆರಂಭಿಸಿದೆ. ಆದರೆ, ಉತ್ತರ ಪ್ರದೇಶದ ಮಿರ್ಜಾಪುರ್ ಜಿಲ್ಲೆಯ ಹಿನೌತಾ ಎಂಬ ಗ್ರಾಮದಲ್ಲಿ ಮಕ್ಕಳಿಗೆ ಚಪಾತಿ ಜೊತೆ ಪಲ್ಯದ ಬದಲು ಉಪ್ಪನ್ನು ಬಡಿಸಲಾಗಿದೆ.
ಮಕ್ಕಳು ಚಪಾತಿಯನ್ನು ಉಪ್ಪಿನೊಂದಿಗೆ ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದ್ದು, ಶಾಲಾ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಇದೇ ವೇಳೆ ಎಂದು ಮಿರ್ಜಾಪುರ್ ಜಿಲ್ಲಾಧಿಕಾರಿ ಅನುರಾಗ್ ಪಟೇಲ್, ಶಿಕ್ಷಕ ಹಾಗೂ ಮೇಲ್ವಿಚಾರಕರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.