
ಗದಗ[ಜೂ.20]: ರಾಜ್ಯದಲ್ಲಿ ಬಿಜೆಪಿ ಮತ್ತೆ ಆಪರೇಷನ್ ಕಮಲಕ್ಕೆ ಕೈಹಾಕಿದೆ, ಜೆಡಿಎಸ್ ಶಾಸಕರೊಬ್ಬರಿಗೆ ₹10ಕೋಟಿ ಆಮಿಷ ನೀಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ ಬೆನ್ನಲ್ಲೇ ಈಗ ವಿಜಯ ಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್-ಜೆಡಿಎಸ್‌ನಿಂದ ಯಾರೂ ನಿರೀಕ್ಷಿಸದ ನಾಯಕರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅವರ ಹೆಸರು ಕೇಳಿದ್ರೆ ಗಾಬರಿಯಾಗ್ತೀರಿ. ಅನೇಕ ನಾಯಕರು ಅವಕಾಶಕ್ಕಾಗಿ ಕಾಯ್ತಿದ್ದಾರೆ ಎಂದು ಮತ್ತಷ್ಟು ಕುತೂಹಲಕ್ಕೆ ಸೃಷ್ಟಿಸಿದರು.
ಮಾಧ್ಯಮದವರು ಯಾವ ಪಕ್ಷದಿಂದ ಎಂದಾಗ ನಗುತ್ತಲೇ ಕಾಂಗ್ರೆಸ್-ಜೆಡಿಎಸ್‌ನ ಪ್ರಭಾವಿ ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಅವರೆಲ್ಲರೂ ಒಂದು ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಅನಿರೀಕ್ಷಿತವಾಗಿ ಬಿಜೆಪಿಗೆ ಸೇರಲಿದ್ದಾರೆ. ಯಾರೆಂದು ಈಗಲೇ ಹೇಳಲ್ಲ. ಅನೇಕರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.