ಸಾಲುಮರದ ತಿಮ್ಮಕ್ಕ ಸೇರಿ ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ

Published : Jan 25, 2019, 10:11 PM ISTUpdated : Jan 25, 2019, 10:18 PM IST
ಸಾಲುಮರದ ತಿಮ್ಮಕ್ಕ ಸೇರಿ ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ

ಸಾರಾಂಶ

ಕೇಂದ್ರ ಸರ್ಕಾರ 2019ನೇ ಸಾಲಿನ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಿದೆ. ಇದರಲ್ಲಿ ಕರ್ನಾಟಕಕ್ಕೆ ಕೇವಲ  5 ಪದ್ಮಶ್ರೀ ಪ್ರಶಸ್ತಿಗಳು ಲಭಿಸಿವೆ.

ಬೆಂಗಳೂರು, [ಜ.25]:  2019ನೇ ಸಾಲಿನ 4 ಪದ್ಮವಿಭೂಷಣ, 14 ಪದ್ಮಭೂಷಣ ಹಾಗೂ 94 ಪದ್ಮಶ್ರೀ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಪೈಕಿ ಪದ್ಮಶ್ರೀ ಪ್ರಶಸ್ತಿಗೆ ಕರ್ನಾಟಕದ ಐವರು ಸಾಧಕರು ಪಾತ್ರರಾಗಿದ್ದಾರೆ.

ಕರ್ನಾಟಕ ಪೊಲೀಸರಿಗೆ ಈ ಬಾರಿ ಇಲ್ಲ ರಾಷ್ಟ್ರಪತಿ ಪದಕ..ಕಾರಣ ನಮ್ಮವರೆ!

ಸಾಮಾಜಿಕ ಕ್ಷೇತ್ರ ಸಾಧಕಿ ಸಾಲುಮರದ ತಿಮ್ಮಕ್ಕ[ಪರಿಸರ] , ಪುರಾತತ್ವ ಕ್ಷೇತ್ರ ಸಾಧಕಿ ಶಾರದಾ ಶ್ರೀನಿವಾಸನ್ [ಪ್ರಾಚ್ಯ ವಸ್ತು ಅಧ್ಯಯನ],  ಡ್ಯಾನ್ಸರ್ ಹಾಗೂ ಖ್ಯಾತ ನಟ ಪ್ರಭುದೇವ ಹಾಗೂ ಸರೋದ್ ವಾದಕ ರಾಜೀವ್ ತಾರಾನಾಥ್ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಣಬ್ ಮುಖರ್ಜಿ ಸೇರಿ ಮೂವರಿಗೆ ಭಾರತ ರತ್ನ

ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ:
ರಾಜ್ಯದ ಸಾಧಕರಿಗೆ ಪದ್ಮವಿಭೂಷಣ ಇಲ್ಲ.. ಪದ್ಮಭೂಷಣವೂ ಸಿಗಲಿಲ್ಲ. ಅಷ್ಟೇ ಅಲ್ಲದೇ ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ಗೌರವ ಸಿಗಲಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ರಾಜ್ಯದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವಾಕ್ ಹೋಗಿದ್ದ 79 ವರ್ಷದ ಅಜ್ಜಿ ನಾಪತ್ತೆ: ನೆಕ್ಲೇಸ್‌ಗೆ ಮೊಮ್ಮಗ ಅಳವಡಿಸಿದ ಜಿಪಿಎಸ್‌ನಿಂದ ಪತ್ತೆ