ನಾವೇನೂ ಕೇಳಿಲ್ಲ: ಟ್ರಂಪ್ ಕಾಶ್ಮೀರ ಮಾತಿಗೆ ಕೇಂದ್ರ ಗರಂ!

Published : Jul 23, 2019, 03:17 PM ISTUpdated : Jul 23, 2019, 03:26 PM IST
ನಾವೇನೂ ಕೇಳಿಲ್ಲ: ಟ್ರಂಪ್ ಕಾಶ್ಮೀರ ಮಾತಿಗೆ ಕೇಂದ್ರ ಗರಂ!

ಸಾರಾಂಶ

ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆಗೆ ಸಿದ್ಧ ಎಂದ ಟ್ರಂಪ್| ಪಾಕ್ ಪ್ರಧಾನಿ ಮನವಿಗೆ ಅಸ್ತು ಎಂದ ಅಮೆರಿಕ ಅಧ್ಯಕ್ಷ| ಮಧ್ಯಸ್ಥಿಕೆಗೆ ಆಗ್ರಹಿಸಿ ಪ್ರಧಾನಿ ಮೋದಿ ಕೂಡ ಮನವಿ ಮಾಡಿದ್ದರಂತೆ| ಟ್ರಂಪ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಭಾರತ| ಮಧ್ಯಸ್ಥಿಕೆಗಾಗಿ ಆಗ್ರಹಿಸಿ ಭಾರತದಿಂದ ಯಾವುದೇ ಪ್ರಸ್ತಾವನೆ ಇಲ್ಲ ಎಂದ ಕೇಂದ್ರ| ಲೋಕಸಭೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮಾಹಿತಿ| ಪ್ರಧಾನಿ ಮೋದಿ ಸ್ಪಷ್ಟನೆಗೆ ವಿಪಕ್ಷಗಳ ಪಟ್ಟು| ದೇಶಕ್ಕೆ ಸತ್ಯ ಹೇಳುವಂತೆ ಆಗ್ರಹಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ|

ನವದೆಹಲಿ(ಜು.23): ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆಗೆ ಭಾರತದ ಪ್ರಧಾನಿ ತಮ್ಮಲ್ಲಿ ಮನವಿ ಮಾಡಿದ್ದಾರೆ ಎಂಬ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿಕೆಯನ್ನು ಕೇಂದ್ರ ಸರ್ಕಾರ ತೀವ್ರವಾಗಿ ಖಂಡಿಸಿದೆ.

ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಭಾರತದ ನಿಲುವು ಸ್ಪಷ್ಟವಾಗಿದ್ದು, ಭಾರತಕ್ಕೆ ಯಾರ ಮಧ್ಯಸ್ಥಿಕೆಯ ಅವಶ್ಯಕತೆಯೂ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಮಧ್ಯಸ್ಥಿಕೆಗಾಗಿ ಆಗ್ರಹಿಸಿ ಭಾರತದಿಂದ ಯಾವುದೇ ಮನವಿ ಸಲ್ಲಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಕಾಶ್ಮೀರ ವಿವಾದ ಪರಿಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಡೋನಾಲ್ಡ್ ಟ್ರಂಪ್ ಅವರನ್ನು ಕೋರಿದ್ದರು. ಇದಕ್ಕೆ ಪ್ರತಿಕ್ರಿಸಿದ್ದ ಟ್ರಂಪ್, ಭಾರತದ ಪ್ರಧಾನಿ ಮೋದಿ ಕೂಡ ಇಂತದ್ದೇ ಮನವಿ ಮಾಡಿದ್ದು, ತಾವು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಹೇಳಿದ್ದರು.

ಸದ್ಯ ಟ್ರಂಪ್ ಹೇಳಿಕೆ ಭಾರತದಲ್ಲಿ ತೀವ್ರ ರಾಜಕೀಯ ವಿವಾದ ಸೃಷ್ಟಿಸಿದ್ದು, ಟ್ರಂಪ್ ಹೇಳಿಕೆ ಕುರಿತು ಖುದ್ದು ಪ್ರಧಾನಿ ಮೋದಿ ಸ್ಪಷ್ಟನೆ ನೀಡಬೇಕೆಂದು ವಿಪಕ್ಷಗಳು ಪಟ್ಟು ಹಿಡಿದಿವೆ.

ಈ ಕುರಿತು ತೀವ್ರ ಅಸಮಾಧಾನ ಹೊರಹಾಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಶ್ಮೀರ ವಿವಾದಕ್ಕೆ ಸಂಬಂದಿಸಿದಂತೆ ಭಾರತದ ನೀತಿ ಸ್ಪಷ್ಟವಾಗಿದ್ದು, ಈ ಮೊದಲಿನ ನಿಲುವಿಗೆ ಪ್ರಧಾನಿ ಚ್ಯುತಿ ತಂದಹಾಗೆ ಭಾಸವಾಗುತ್ತಿದೆ. ಪ್ರಧಾನಿ ಮೋದಿ ಕೂಡಲೇ ಈ ಕುರಿತು ದೇಶಕ್ಕೆ ಸ್ಪಷ್ಟನೆ ನೀಡಬೇಕೆಂದು ರಾಹುಲ್ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಗ್ರಾಹಕರಿಗೆ ಬಂಪರ್‌ ಪ್ಲ್ಯಾನ್‌ ಘೋಷಿಸಿದ Vi: 61 ರೂಪಾಯಿಯ ಮೊಬೈಲ್‌ ರಿಚಾರ್ಜ್‌ಗೆ 25 ಸಾವಿರದ ಬೆನಿಫಿಟ್‌!