
ಮಂಗಳೂರು, (ಮಾ.09): ಮುಂಬರುವ ಲೋಕಸಭಾ ಚುನಾವಣೆ ತಯಾರಿಗೆ ಇಂದು (ಶನಿವಾರ) ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ ಬಿಜೆಪಿ ಕ್ಲಸ್ಟರ್ ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯಿತು.
ಆದ್ರೆ ಸಮಾವೇಶದಲ್ಲಿಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸುಳಿವು ನೀಡಿದ್ದಾರೆ.
ಕಾಶ್ಮೀರಿಗಳ ಮೇಲೆ ದಾಳಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ: ಮೋದಿ
ಮಂಗಳೂರಿನಲ್ಲಿ ಆಯೋಜಿಸಲಾಗದ್ದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, 'ಐದು ವರ್ಷದಲ್ಲಿ ಮೂರು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ. ಮೊದಲನೆಯದು ಉರಿ, ಎರಡನೆಯದು ಬಾಲಾಕೋಟ್, ಮೂರನೆಯದ್ದು ನಾನು ಹೇಳಲಾರೆ' ಎಂದು ಹೇಳುವ ಮೂಲಕ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಸುಳಿವು ನೀಡಿದರು.
ನಮ್ಮ ವಾಯುಸೇನೆ ಉಗ್ರರ ಹುಟ್ಟಡಗಿಸಲು ಪಾಕ್ ಭೂಮಿಗೆ ಹೋಗಿ ದಾಳಿ ಮಾಡಿತು. ಈ ಮೂಲಕ ನಾವು ಪಾಕಿಸ್ತಾನಕ್ಕೆ ಸ್ಪಷ್ಡ ಸಂದೇಶ ನೀಡಿದ್ದೇವೆ. ಉಗ್ರವಾದಕ್ಕೆ ನೀವು ಬೆಂಬಲ ಕೊಟ್ಟರೆ ಬೆಲೆ ತೆರಬೇಕಾಗುತ್ತದೆ ಎಂದು ಸಮಾವೇಶದಲ್ಲಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದರು.
ನಮ್ಮ ಮಿಗ್ 21 ಅವರ ಎಫ್ 16 ಉರುಳಿಸುವ ಮೂಲಕ ಪರಾಕ್ರಮ ಮೆರೆದಿದೆ. ಆತಂಕವಾದ ನಮ್ಮ ಮಾನ ಮತ್ತು ಸ್ವಾಭೀಮಾನಕ್ಕೆ ಸವಾಲಾಗಿದೆ. ಹೀಗಾಗಿ ಇದನ್ನು ಬುಡ ಸಮೇತ ಕಿತ್ತೊಗೆಯುವುದೇ ನಮ್ಮ ಉದ್ದೇಶ ಎಂದು ಹೇಳಿದರು.
ರಾಜನಾಥ್ ಸಿಂಗ್ ಹೇಳಿಕೆಯನ್ನು ಗಮನಿಸಿದರೆ, ಇನ್ನು ಒಂದು ಶಾಸ್ತಿ ಪಾಕಿಸ್ತಾನಕ್ಕೆ ಕಾದಿದೆ ಎನ್ನುವ ಅರ್ಥದಲ್ಲಿ ಹೇಳಿದರು.
ಸಾಂದರ್ಭಿಕ ಚಿತ್ರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.