
ಬೆಂಗಳೂರು: ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ರಾಜ್ಯದ ಕೃಷಿ ಸಚಿವ ಕೃಷ್ಣ ಬೈರೇಗೌಡರಿಗೆ ಶಹಾಬ್ಬಾಸ್ ಎಂದಿದ್ದಾರೆ. ಯಾಕಂತೀರಾ? ಬೆಂಗಳೂರಿನಲ್ಲಿ ರಾಷ್ಟ್ರೀಯ ಸಿರಿಧಾನ್ಯ ಮೇಳಕ್ಕೆ ಇಂದು ಚಾಲನೆ ನೀಡಲಾಗಿದೆ. ಸಿರಿಧಾನ್ಯ ಬೆಳೆಯುವ ಹಾಗೂ ಬಳಸುವ ಬಗ್ಗೆ ಜನರಲ್ಲಿ ಜಾಗೃತಿಯನ್ನುಂಟು ಮಾಡುವ ನಿಟ್ಟಿನಲ್ಲಿ ಕೃಷಿ ಸಚಿವ ವಿಶೇಷ ಮುತುರ್ಜಿಯೊಂದಿಗೆ ಈ ಮೇಳವನ್ನು ಆಯೋಜಿಸಿದ್ದಾರೆ. ಸಿರಿಧಾನ್ಯ ಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಕೂಡಾ ಭಾಗವಹಿಸಿದ್ದರು. ಐಟಿ/ಬಿಟಿ/ ಏರೋಸ್ಪೇಸ್ ರಾಜಧಾನಿಯಾಗಿರುವ ಬೆಂಗಳೂರು ಗ ಸಿರಿಧಾನ್ಯ ರಾಜಧಾನಿಯೂ ಆಗಿದೆ ಎಂದು ಹರ್ಷ ವ್ಯಕ್ತಪಡಿಸಿರುವ ಅನಂತ್ ಕುಮಾರ್, ಈ ಯೋಜನೆಯನ್ನು ಹಮ್ಮಿಕೊಂಡಿರುವ ಕೃಷ್ಣ ಬೈರೇಗೌಡಗೆ ಶಹಾಬ್ಬಾಸ್ ಎಂದು ಟ್ವೀಟ್ ಮಾಡಿದ್ದಾರೆ. ಇಂದು ಆರಂಭವಾಗಿರುವ ಸಿರಿಧಾನ್ಯ ಮೇಳವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರದವೆರೆಗೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.