ಕೇಂದ್ರ ಸಚಿವೆಯನ್ನೇ ಚುಡಾಯಿಸಿದ ದುಷ್ಕರ್ಮಿಗಳು!

Published : Jun 13, 2018, 08:53 AM IST
ಕೇಂದ್ರ ಸಚಿವೆಯನ್ನೇ  ಚುಡಾಯಿಸಿದ ದುಷ್ಕರ್ಮಿಗಳು!

ಸಾರಾಂಶ

ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್‌ ಅವರನ್ನೇ ಕಾರಿನಲ್ಲಿ ಹೋಗುತ್ತಿದ್ದ ಗುಂಪೊದು ಅವಹೇಳನಕಾರಿಯಾಗಿ ಚುಡಾಯಿಸಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಬಗ್ಗೆ ಅನುಪ್ರಿಯಾ ನಂತರ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.  

ವಾರಾಣಸಿ (ಜೂ. 13):  ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್‌ ಅವರನ್ನೇ ಕಾರಿನಲ್ಲಿ ಹೋಗುತ್ತಿದ್ದ ಗುಂಪೊದು ಅವಹೇಳನಕಾರಿಯಾಗಿ ಚುಡಾಯಿಸಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿದೆ.

ತಮ್ಮ ಲೋಕಸಭಾ ಕ್ಷೇತ್ರ ಮಿರ್ಜಾಪುರದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ, ಅನುಪ್ರಿಯಾ ಅವರು ವಾರಾಣಸಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ನಂಬರ್‌ಪ್ಲೇಟ್‌ ಇಲ್ಲದ ಕಾರಿನಲ್ಲಿ ಚಲಿಸುತ್ತಿದ್ದ ಮೂವರ ಗುಂಪು ಸಚಿವರ ವಾಹನವನ್ನು ಹಿಂದಿಕ್ಕುವ ಯತ್ನ ಮಾಡಿತ್ತು. ಈ ವೇಳೆ ಸಚಿವರ ಬೆಂಗಾವಲು ಪಡೆಯ ಸಿಬ್ಬಂದಿ ಎಚ್ಚರಿಕೆ ನೀಡಿದರೂ ಆಲಿಸಿದ ಗುಂಪು ಎಚ್ಚರಿಕೆಯನ್ನು ನಿರ್ಲಕ್ಷಿಸಿದ್ದೂ ಅಲ್ಲದೆ, ಸಚಿವೆ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಪರಾರಿಯಾಗಿದೆ.

ಘಟನೆ ಬಗ್ಗೆ ಅನುಪ್ರಿಯಾ ನಂತರ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ವರ್ಷ ದೆಹಲಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ವಿರುದ್ಧವೂ ನಾಲ್ವರು ಯುವಕರ ಗುಂಪು ಇದೇ ರೀತಿಯ ವರ್ತನೆ ತೋರಿತ್ತು. ಕುಡಿದ ಮತ್ತಿನಲ್ಲಿದ್ದ ನಾಲ್ವರನ್ನೂ ಬಳಿಕ ವಶಕ್ಕೆ ಪಡೆಯಲಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈತರ ಯೂರಿಯಾ ಕದ್ದು ತಮಿಳ್ನಾಡಿಗೆ ಸಾಗಣೆ ದಂಧೆ ಪತ್ತೆ
ಗೃಹಲಕ್ಷ್ಮಿ ಸ್ಕೀಂ ₹5000 ಕೋಟಿ ಹಗರಣ: ಬಿಜೆಪಿ