ರಾಷ್ಟ್ರಗೀತೆ ಹಾಡುವಾಗ ಕುಸಿದು ಬಿದ್ದ ನಿತಿನ್ ಗಡ್ಕರಿ!

Published : Aug 01, 2019, 04:20 PM ISTUpdated : Aug 01, 2019, 04:35 PM IST
ರಾಷ್ಟ್ರಗೀತೆ ಹಾಡುವಾಗ ಕುಸಿದು ಬಿದ್ದ ನಿತಿನ್ ಗಡ್ಕರಿ!

ಸಾರಾಂಶ

ರಾಷ್ಟ್ರಗೀತೆ ಹಾಡುವಾಗ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ| ಮಹಾರಾಷ್ಟ್ರದ ಸೋಲಾಪುರದ ಪುಣ್ಯಶ್ಲೋಕ್ ಅಹಿಲ್ಯಾದೇವಿ ಹೋಳ್ಕರ್ ವಿವಿಯಲ್ಲಿ ಘಟನೆ| ಸ್ಥಳದಲ್ಲೇ ವೈದ್ಯರಿಂದ ನಿತಿನ್ ಗಡ್ಕರಿ ಆರೋಗ್ಯ ಪರಿಶೀಲನೆ| ಅನಾರೋಗ್ಯದ ಹಿನ್ನೆಲೆಯಲ್ಲಿ ಗಡ್ಕರಿ ಅವರಎಲ್ಲಾ ಕಾರ್ಯಕ್ರಮಗಳು ರದ್ದು|

ಸೋಲಾಪುರ(ಆ.01): ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ನಡೆದಿದೆ.

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕೈಗೊಂಡಿರುವ ನಿತಿನ್ ಗಡ್ಕರಿ, ಪುಣ್ಯಶ್ಲೋಕ್ ಅಹಿಲ್ಯಾದೇವಿ ಹೋಳ್ಕರ್ ಸೋಲಾಪುರ ವಿವಿಯಲ್ಲಿ ನಡೆದ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರಗೀತೆ ಹಾಡುತ್ತಿದ್ದ ವೇಳೆ ಗಡ್ಕರಿ ಕುಸಿದು ಬಿದ್ದಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ವೈದ್ಯರು ಗಡ್ಕರಿ ಅವರ ಪರಿಶೀಲನೆ ನಡೆಸಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಗಡ್ಕರಿ ಅವರ ಇನ್ನುಳಿದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಡಿಸೆಂಬರ್‌ನಲ್ಲಿ ನಾಗ್ಪುರದ  ಮಹಾತ್ಮಾ ಪುಲೆ ಕೃಷಿ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದ ನಿತಿನ್ ಗಡ್ಕರಿ, ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ