ಕೇಂದ್ರ ಸಚಿವನನ್ನು ಎಳೆದಾಡಿ, ಕಪಾಳಕ್ಕೆ ಹೊಡೆದ ಯುವಕ

Published : Dec 09, 2018, 02:59 PM IST
ಕೇಂದ್ರ ಸಚಿವನನ್ನು ಎಳೆದಾಡಿ, ಕಪಾಳಕ್ಕೆ ಹೊಡೆದ ಯುವಕ

ಸಾರಾಂಶ

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರನ್ನು ಯುವಕನೊಬ್ಬ ಎಳೆದಾಡಿ, ಕಪಾಳಕ್ಕೆ ಹೊಡೆದು ರದ್ದಾಂತ ಮಾಡಿದ್ದಾನೆ.

ಥಾಣೆ,[ಡಿ.09]: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್​ ಅತವಾಲೆ ಅವರನ್ನು ಎಳೆದಾಡಿ ಹಲ್ಲೆ ಮಾಡಿರುವ ಘಟನೆ  ಮಹಾರಾಷ್ಟ್ರದ ಅಂಬೇರ್​ನಾಥ್​ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಮದಾಸ್ ಅತವಾಲೆ ಅವರು ಭಾಷಣ ಮುಗಿಸಿ ವೇದಿಕೆಯಿಂದ ಕೆಳಗಿಳಿಯುತ್ತಲೇ ಅವರತ್ತ ನುಗ್ಗಿ ಬಂದ ಪ್ರವೀಣ್​ ಗೋಸಾವಿ ಎಂಬ ಯುವಕ, ಸಚಿವರನ್ನ ಕೆಳಗೆ ತಳ್ಳಿ, ಬಳಿಕ ಎಳೆದಾಡಿ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಸಚಿವರ ಮೇಲೆ ಹಲ್ಲೆ ನಡೆಯುತ್ತಲೇ ಅವರ ನೆರವಿಗೆ ಧಾವಿಸಿದ ಅವರ ಬೆಂಬಲಿಗರು ಮತ್ತು ಅಂಗರಕ್ಷಕರು, ಯುವಕ ಪ್ರವೀಣ್​ನನ್ನು ಪಕ್ಕಕ್ಕೆ ಎಳೆದು ಬೀಳಿಸಿ, ಹೊಡೆದಿದ್ದಾರೆ. 

 ಆ ನಂತರ ಸಚಿವರ ಬೆಂಬಲಿಗರು ವ್ಯಕ್ತಿಯನ್ನು ಹಿಡಿದು ಥಳಿಸಿದ್ದಾರೆ. ಸಚಿವರ ಮೇಲೆ ಹಲ್ಲೆ ನಡೆಸಿದ ಯುವಕ ಪ್ರವೀಣ್​ ಅವರದ್ದೇ ಪಕ್ಷವಾದ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾದ (ಆರ್​ಪಿಐ) ಕಾರ್ಯಕರ್ತ ಎನ್ನಲಾಗಿದ್ದು, ಪ್ರವೀಣ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?