
ನವದೆಹಲಿ(ಫೆ.13): ಕೊರೋನಾ ಸಂಕಷ್ಟದ ನಡುವೆಯೂ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ರಸಗೊಬ್ಬರ ಪೂರೈಕೆ ಶೇ.25ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ರಾಜ್ಯ ಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ವೇಳೆ ಉತ್ತರಪ್ರದೇಶದ ಜಿ.ಬಿ.ಎಲ್. ನರಸಿಂಹರಾವ್ ಅವರು ಕೇಳಿದ ಪೂರಕ ಪ್ರಶ್ನೆಗೆ ಉತ್ತರಿಸಿದ ಸದಾನಂದ ಗೌಡ, ಕೊರೋನಾ ಅವಧಿಯಲ್ಲಿ ರಸಗೊಬ್ಬರ ಉತ್ಪಾದನೆ ಮತ್ತು ಸಾಗಣೆ ಬಹುದೊಡ್ಡ ಸವಾಲಾಗಿತ್ತು. ಆದರೆ ಇವನ್ನೆಲ್ಲ ಸಮರ್ಪಕವಾಗಿ ನಿಭಾಯಿಸಲಾಯಿತು. ಬಿತ್ತನೆ ಪ್ರದೇಶವೃದ್ಧಿಸಿ ರಸಗೊಬ್ಬರ ಬೇಡಿಕೆ ಹೆಚ್ಚಾದಾಗ ಅದಕ್ಕೆ ತಕ್ಕಂತೆ ಪೂರೈಕೆ ವ್ಯವಸ್ಥೆ ಮಾಡಿ ಎಲ್ಲೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಯಿತು. ಇದರಿಂದಾಗಿ ಕೃಷಿವಲಯ ಶೇ. 3.7ರಷ್ಟು ಬೆಳವಣಿಗೆ ಸಾಧಿಸಲು ಸಾಧ್ಯವಾಯಿತು ಎಂದು ಸಚಿವರು ಮಾಹಿತಿ ನೀಡಿದರು.
ಅರ್ಹತೆ ಇಲ್ಲದವರು ಮೀಸಲಾತಿ ಕೇಳೋದು ರಾಜಕೀಯ ನಾಟಕ: ಸದಾನಂದ ಗೌಡ
ಉಪ ರಾಷ್ಟ್ರಪತಿ ಮೆಚ್ಚುಗೆ:
ಸಭಾಪತಿ ಪೀಠದಲ್ಲಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೊರೋನಾದ ನಡುವೆಯೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಂಡದ್ದಕ್ಕೆ ಸಚಿವ ಡಿ.ವಿ. ಸದಾನಂದಗೌಡರನ್ನು ಅಭಿನಂದಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.