
ಲಕ್ನೋ: ಉತ್ತರ ಪ್ರದೇಶ ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಬಿಜೆಪಿಯು ಭಾರೀ ಗೆಲುವು ಸಾಧಿಸಿದ ಬೆನ್ನಲ್ಲೇ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಗೆಲುವಿಗೆ ತಿರುಚಲ್ಪಟ್ಟ ಇವಿಎಂಗಳೇ ಕಾರಣವೆಂದು ಅವರು ಪುನರುಚ್ಚರಿಸಿದ್ದಾರೆ.
2014 ಲೋಕಸಭಾ ಚುನಾವಣೆ, 2017ರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗಳಂತೆ ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಕೂಡಾ ಇವಿಎಂ ವಂಚನೆ ನಡೆದಿದೆ ಎಂದು ಮಾಯಾವತಿ ಹೇಳಿದ್ದಾರೆ.
ಬಿಜೆಪಿಗೆ ಪ್ರಜಾತಂತ್ರದಲ್ಲಿ ವಿಶ್ವಾಸವಿದ್ದರೆ, ಇವಿಎಂಗಳನ್ನು ಬದಿಗೊತ್ತಿ ಮತಪತ್ರ (ಬ್ಯಾಲೆಟ್) ಮೂಲಕ ಚುನಾವಣೆಗಳನ್ನೆದುರಿಸಲಿ. ಹಾಗೆ ಮಾಡಿದರೆ ಬಿಜೆಪಿಯು ಖಂಡಿತವಾಗಿಯೂ ಅಧಿಕಾರಕ್ಕೆ ಬರಲು ಸಾದಧ್ಯವಿಲ್ಲವೆಂದು ಮಾಯವತಿ ಹೇಳಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆ ಬಳಿಕ ಮಾಯಾವತಿ ಇವಿಎಂ ಬಳಕೆಯ ವಿರುದ್ಧ ಆಕ್ಷೇಪಿಸುತ್ತಾ ಬಂದಿದ್ದಾರೆ. ಬಿಜೆಪಿಯು ಇವಿಎಂಗಳನ್ನು ತಿರುಚಿದೆ ಎಂದು ಅವರು ಆರೋಪಿಸಿದ್ದರು. ಆ ಬಳಿಕ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಮತ್ತಿತರ ಪಕ್ಷಗಳು ಕೂಡಾ ಇವಿಎಂ ಬಳಕೆಯನ್ನು ವಿರೋಧಿಸಿದ್ದವು. ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಚುನಾವಣಾ ಆಯೋಗವು ಇವಿಎಂನ್ನು ಹ್ಯಾಕ್ ಮಾಡಿ ತೋರಿಸುವಂತೆ ರಾಜಕೀಯ ಪಕ್ಷಗಳಿಗೆ ಪಂಥಾಹ್ವಾನವನ್ನು ಕೂಡಾ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.