ಲೋಕಸಭಾ ಚುನಾವಣೆ : ಸಚಿವರ ವಿದೇಶಿ ಟ್ರಿಪ್ ನಿಷೇಧಿಸಿದ ಯುಪಿ ಸಿಎಂ

By Web DeskFirst Published Oct 18, 2018, 8:30 PM IST
Highlights

ಯೋಗಿ ಆದಿತ್ಯನಾಥ್ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಚ್ಚು ಸ್ಥಾನ ಗೆಲ್ಲಿಸಿಕೊಳ್ಳಲು ರೂಪರೇಷು ಸಿದ್ದಪಡಿಸುತ್ತಿದ್ದು, ಕಾರ್ಯಕರ್ತರ ಹಾಗೂ ಸಾರ್ವಜನಿಕ ಸಭೆಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳುತ್ತಿದ್ದಾರೆ. 

ಲಖನೌ[ಅ.18]: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಮುಂದಿನ 6 ತಿಂಗಳುಗಳ ಕಾಲ ಸಂಪುಟ ಸಚಿವರ ವಿದೇಶಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸಂಸದರು ಇನ್ನು ಮುಂದೆ ಹೆಚ್ಚಿನ ಸಮಯವನ್ನು ತನ್ನ ಕ್ಷೇತ್ರದಲ್ಲಿ ಕಳೆಯಬೇಕು ಎಂದು ಘೋಷಿಸಿದರು. ತಾವು ಒಳಗೊಂಡಂತೆ ಪಕ್ಷದ ಸಂಸದರು ಮುಂದಿನ ದಿನಗಳಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು ಸರ್ಕಾರದ ಯೋಜನೆಗಳ ಜಾರಿ, ಸ್ಥಳೀಯ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳುವುದಾಗಿ ಮಾಹಿತಿ ನೀಡಿದರು.

ಚುನಾವಣೆ ಸಮೀಪಿಸುತ್ತಿರುವ ಕಾರಣ ಕಾರ್ಯಕರ್ತರು ಕೇಂದ್ರ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು. ಯೋಗಿ ಆದಿತ್ಯನಾಥ್ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೆಚ್ಚು ಸ್ಥಾನ ಗೆಲ್ಲಿಸಿಕೊಳ್ಳಲು ರೂಪರೇಷು ಸಿದ್ದಪಡಿಸುತ್ತಿದ್ದು, ಕಾರ್ಯಕರ್ತರ ಹಾಗೂ ಸಾರ್ವಜನಿಕ ಸಭೆಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳುತ್ತಿದ್ದಾರೆ. 

ಉತ್ತರ ಪ್ರದೇಶ ಅತೀ ಹೆಚ್ಚು ಲೋಕಸಭಾ ಸದಸ್ಯರಿರುವ ರಾಜ್ಯವಾಗಿದ್ದು ಇಲ್ಲಿ ಹೆಚ್ಚು ಸ್ಥಾನ ಗೆಲುವು ಸಾಧಿಸಿದವರು ಅತೀ ಸುಲಭವಾಗಿ ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 71 ಸ್ಥಾನಗಳಲ್ಲಿ ವಿಜಯಗಳಿಸಿತ್ತು.  

  

click me!