
ನವದೆಹಲಿ (ಮೇ.22): ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಹತ್ಯೆ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐಗೆ ವಹಿಸಿದೆ. ಪ್ರಕರಣವನ್ನು ಸಿಬಿಐಗೆ ಶಿಫಾರಸ್ಸು ಮಾಡಲು ಉತ್ತರ ಪ್ರದೇಶ ಸರ್ಕಾರವು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯನ್ನು ನಾಳೆ ಭೇಟಿ ಮಾಡಲಿದೆ.
ಅನುರಾಗ್ ತಿವಾರಿ ಕುಟುಂಬವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಇಂದು ಭೇಟಿ ಮಾಡಿದ್ದು ಸಿಬಿಐ ತನಿಖೆಗೆ ಒತ್ತಾಯಿಸಿದೆ. ಅವರದು ಸಹಜ ಸಾವಲ್ಲ. ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೋಸ್ಟ್ ಮಾರ್ಟಮ್ ವರದಿ ಹೇಳುತ್ತದೆ. ಹಾಗಾಗಿ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕುಟುಂಬದವರು ಒತ್ತಾಯಿಸಿದ್ದಾರೆ. ಒತ್ತಡಕ್ಕೆ ಮಣಿದ ಸರ್ಕಾರ ಕಡೆಗೂ ಸಿಬಿಐಗೆ ವಹಿಸಲು ನಿರ್ಧರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.