
ಲಕ್ನೋ(ಜೂ.6): ಕಾಶಿ ವಿಶ್ವನಾಥ ಮತ್ತು ಕೃಷ್ಣ ಜನ್ಮಭೂಮಿ ಸ್ಫೋಟಿಸುವುದಾಗಿ ಲಷ್ಕರ್-ಎ-ತೋಯ್ಬಾ ಸಂಘಟನೆ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟೆಚ್ಚರ ಘೋಷಣೆ ಮಾಡಿದ್ದು, ರಾಜ್ಯದ ಪ್ರಮುಖ ಸ್ಥಳಗಳಿಗೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಎಲ್ಇಟಿ ಉಗ್ರ ಸಂಘಟನೆಯ ಕಮಾಂಡೆರ್ ಮೌಲಾನಾ ಅಂಬು ಶೇಖ್, ಕಳೆದ ತಿಂಗಳು ನೈರುತ್ಯ ರೈಲ್ವೇ ಗೆ ಪತ್ರ ರವಾನಿಸಿದ್ದು ಈ ಸಂಬಂಧ ಉತ್ತರಪ್ರದೇಶ ಪೊಲೀಸರು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದ್ದಾರೆ. ಕಳೆದ ಮೇ 29 ರಂದು ದೆಹಲಿಯ ನೈರುತ್ಯ ರೈಲ್ವೆ ಈ ಪತ್ರವನ್ನು ಸ್ವಿಕರೀಸಿದ್ದು ಪತ್ರದಲ್ಲಿ ಶಹಾನಪುರ ಮತ್ತು ಹಪುರ್ ಸೇರಿದಂತೆ ಹಲವು ರೈಲು ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಇದೇ ಜೂನ್ 8-10ರಂದು ಕೃಷ್ಣ ಜನ್ಮಭೂಮಿ ಮಥುರಾ ಮತ್ತು ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.