ಪ್ರಿಯಾಂಕಾ ಆರೋಪಕ್ಕೆ ತಿರುಗೇಟು ಕೊಟ್ಟ ಯುಪಿ ಪೊಲೀಸ್!

Published : Jun 29, 2019, 06:20 PM IST
ಪ್ರಿಯಾಂಕಾ ಆರೋಪಕ್ಕೆ ತಿರುಗೇಟು ಕೊಟ್ಟ ಯುಪಿ ಪೊಲೀಸ್!

ಸಾರಾಂಶ

ಉತ್ತರಪ್ರದೇಶದಲ್ಲಿ ಜಂಗಲ್ ರಾಜ್ ಅಸ್ತಿತ್ವದಲ್ಲಿದೆ ಎಂದ ಪ್ರಿಯಾಂಕಾ| ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ’| ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ ಪ್ರಿಯಾಂಕಾ ಗಾಂಧಿ| ಪ್ರಿಯಾಂಕಾ ಆರೋಪಕ್ಕೆ ಪ್ರತ್ಯುತ್ತರ ನೀಡಿದ ಯುಪಿ ಪೊಲೀಸ್ ಇಲಾಖೆ| ಅಪರಾಧ ಪ್ರಮಾಣ ತಗ್ಗಿರುವ ಕುರಿತು ಟ್ವೀಟ್’ನಲ್ಲಿ ಮಾಹಿತಿ|

ಲಕ್ನೋ(ಜೂ.29): ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಅಪರಾಧಿಗಳು ನಿರ್ಭಯವಾಗಿ ಓಡಾಡಿಕೊಂಡಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಬಿಜೆಪಿ ಆಡಳಿತ ಜಂಗಲ್ ರಾಜ್ ನಂತಾಗಿದೆ ಎಂದು ಗುಡುಗಿದ್ದಾರೆ.

ಆದರೆ ಪ್ರಿಯಾಂಗಾ ಟ್ವೀಟ್’ಗೆ ಸೂಕ್ತ ತಿರುಗೇಟು ನೀಡಿರುವ ಉತ್ತರಪ್ರದೇಶ ಪೊಲೀಸ್ ಇಲಾಖೆ, ರಾಜ್ಯದಲ್ಲಿ ಅಪರಾಧ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬುದನ್ನು ಅಂಕಿ ಅಂಶಗಳ ಸಮೇತ ಹೊರಗಡೆವಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಪೊಲೀಸ್ ಇಲಾಖೆ, ಅಪರಾಧ ಪ್ರಕರಣಗಳನ್ನು ಹತ್ತಿಕ್ಕುವಲ್ಲಿ ಪೊಲೀಸ್ ಇಲಾಖೆ ಕೈಗೊಂಡಿರುವ ದಿಟ್ಟ ಕ್ರಮಗಳ ಕುರಿತು ವಿವರಣೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್‌ ದೆವ್ವದ ಮನೆ, ದಿನಕ್ಕೊಂದು ಬಿಳಿ-ಕರಿ ದೆವ್ವ ಹೊರ ಬರ್ತಿವೆ: ಆರ್.ಅಶೋಕ್ ವ್ಯಂಗ್ಯ
ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಶೀಘ್ರ ಜಾರಿ: ಸಚಿವ ಶಿವರಾಜ ತಂಗಡಗಿ