
ಗೋರಖ್‌ಪುರ[ಮಾ.13]: ಯೂಟ್ಯೂಬ್ ಚಾನೆಲ್ ನೋಡಿಕೊಂಡು ನೋಡಿ ಸ್ವಯಂ ಹೆರಿಗೆಗೆ ಯತ್ನಿಸಿದ ಅವಿವಾಹಿತ ಮಹಿಳೆ ಹಾಗೂ ನವಜಾತ ಶಿಶು ಸ್ಥಳದಲ್ಲೇ ಸಾವನ್ನಪ್ಪಿದ ಕರುಣಾಜನಕ ಘಟನೆ ಸೋಮವಾರ ಗೋರಖ್‌ಪುರದ ಬಿಲಾಂದಪುರ ಪ್ರದೇಶದಲ್ಲಿ ನಡೆದಿದೆ.
ಮಹಿಳೆ ವಾಸವಿದ್ದ ಮನೆಯಿಂದ ರಕ್ತ ಹರಿದು ಬರುತ್ತಿದ್ದುದನ್ನು ಕಂಡು ಮನೆಯ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಗಿಲು ಮುರಿದು ನೋಡಿದಾಗ ಮಹಿಳೆ ಮತ್ತು ಮಗು ಸಾವನ್ನಪ್ಪಿದ್ದು ಕಂಡು ಬಂದಿದೆ.
ಪ್ರಾಥಮಿಕ ತನಿಖೆ ವೇಳೆ ಮಹಿಳೆ ಮೊಬೈಲ್ ಮೂಲಕ ಯೂಟ್ಯೂಬ್‌ನಲ್ಲಿ ಸುರಕ್ಷಿತ ಸ್ವಯಂ ಹೆರಿಗೆ ಕುರಿತು ಹೆಚ್ಚಿನ ವೀಕ್ಷಣೆ ನಡೆಸಿದ್ದು ಬೆಳಕಿಗೆ ಬಂದಿದೆ. ಈಕೆ ಅವಿವಾಹಿತೆಯಾಗಿದ್ದು, 4 ದಿನಗಳ ಹಿಂದಷ್ಟೇ ಈ ಮನೆಗೆ ಬಾಡಿಗೆ ಬಂದಿದ್ದಳು. ಶವದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಶವ ಹಸ್ತಾಂತರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.