ಚಿತ್ರನಟ ಉಪೇಂದ್ರ ಅವರು ಸ್ಥಾಪಿಸಲು ಉದ್ದೇಶಿಸಿರುವ ಹೊಸ ರಾಜಕೀಯ ಪಕ್ಷದ ಹೆಸರು ಪ್ರಜಾಕೀಯ ಅಲ್ಲ. ‘ಉತ್ತಮ ಪ್ರಜಾ ಪಾರ್ಟಿ.’ ಈ ಬಗ್ಗೆ ಉಪೇಂದ್ರ ಅವರು ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ ನಂತರ ತೀರ್ಮಾನ ಕೈಗೊಂಡಿದ್ದು, ಮುಂದಿನ ನೋಂದಣಿ ಮತ್ತಿತರ ತಾಂತ್ರಿಕ ಪ್ರಕ್ರಿಯೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು (ಆ.20): ಚಿತ್ರನಟ ಉಪೇಂದ್ರ ಅವರು ಸ್ಥಾಪಿಸಲು ಉದ್ದೇಶಿಸಿರುವ ಹೊಸ ರಾಜಕೀಯ ಪಕ್ಷದ ಹೆಸರು ಪ್ರಜಾಕೀಯ ಅಲ್ಲ. ‘ಉತ್ತಮ ಪ್ರಜಾ ಪಾರ್ಟಿ.’ ಈ ಬಗ್ಗೆ ಉಪೇಂದ್ರ ಅವರು ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ ನಂತರ ತೀರ್ಮಾನ ಕೈಗೊಂಡಿದ್ದು, ಮುಂದಿನ ನೋಂದಣಿ ಮತ್ತಿತರ ತಾಂತ್ರಿಕ ಪ್ರಕ್ರಿಯೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
ಈ ಹೊಸ ಪಕ್ಷದ ಸದಸ್ಯತ್ವ ಪಡೆದುಕೊಳ್ಳಲು ಬಯಸುವವರಿಗೆ ಅರ್ಜಿಯನ್ನೂ ಸಿದ್ಧಪಡಿಸಲಾಗಿದೆ. ಆಸಕ್ತರು ಇತರೆ ಎಲ್ಲ ವೈಯಕ್ತಿಕ ವಿವರಗಳ ಜೊತೆ ತಮ್ಮ ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಯ ಎರಡು ಪ್ರತಿಗಳನ್ನೂ ಅರ್ಜಿಯೊಂದಿಗೆ ಲಗತ್ತಿಸಬೇಕು ಎಂಬುದನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ.
ಕೆಲವು ದಿನಗಳ ಹಿಂದಷ್ಟೇ ಉಪೇಂದ್ರ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಘೋಷಣೆ ಮಾಡಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಉದ್ದೇಶ ಹೊಂದಿರುವ ಉಪೇಂದ್ರ ಅವರು ಬಿರುಸಿನ ತಯಾರಿ ಆರಂಭಿಸಿದ್ದಾರೆ ಎನ್ನಲಾಗಿದೆ. ಚಲನಚಿತ್ರಗಳಿಗೆ ಸಂಬಂಧಿಸಿದ ತಮ್ಮ ಎಲ್ಲ ಕೆಲಸಗಳನ್ನೂ ಶೀಘ್ರದಲ್ಲೇ ಮುಗಿಸಿಕೊಂಡು ಚುನಾವಣಾ ಅಖಾಡಕ್ಕೆ ಇಳಿಯಲು ಮುಂದಾಗಿರುವ ಉಪೇಂದ್ರ ಅವರು ಅಗತ್ಯ ಕಂಡು ಬಂದರೆ ರಾಜ್ಯದ ವಿವಿಧ ನಗರಗಳಿಗೂ ತೆರಳಿ ಪಕ್ಷ ಸ್ಥಾಪನೆಯ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ಜತೆಗೆ ಸಾಮಾಜಿಕ ಜಾಲತಾಣದ ಮೂಲಕ ಅರ್ಜಿ ಸ್ವೀಕರಿಸುವುದೂ ಸೇರಿದಂತೆ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ಪರಿಶೀಲಿಸಿ ಮುಂದಿನ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.