
ಬೆಂಗಳೂರು(ಏ.28): ಬಾಹುಬಲಿ 2 ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿದ್ದ ಚಿತ್ರ ಗುರುವಾರವಷ್ಟೇ ದೇಶದಾದ್ಯಂತ ತೆರೆಕಂಡು ಸದ್ದು ಮಾಡುತ್ತಿದೆ.
ಎಸ್ಎಸ್ ರಾಜಮೌಳಿ ನಿರ್ದೇಶನದ ಬಹುತಾರಾಗಣದ ಚಿತ್ರ ನಾನಾ ಕಾರಣಗಳಿಂದ ಕರ್ನಾಟಕದಲ್ಲಿ ಸಾಕಷ್ಟು ವಿವಾದಕ್ಕೂ ಗುರಿಯಾಗಿದ್ದು ಗೊತ್ತೇ ಇದೆ. ಸಾಕಷ್ಟು ವಿವಾದ ಹಾಗೂ ವಿರೋಧದ ಬಳಿಕ ಗುರುವಾರ ತಡರಾತ್ರಿಯೇ ಬೆಂಗಳೂರಿನ ಹಲವೆಡೆ ಚಿತ್ರ ತೆರೆಕಂಡಿದ್ದು ಭರ್ಜರಿ ರೆಸ್ಫಾನ್ಸ್ ಕೂಡಾ ವ್ಯಕ್ತವಾಗಿದೆ.
ಈ ಸಂದರ್ಭದಲ್ಲಿ ಕನ್ನಡಿಗರ ಕುರಿತು ರಿಯಲ್ ಸ್ಟಾರ್ ಉಪೇಂದ್ರ ನಾವು ಕನ್ನಡಿಗರಲ್ಲವೋ ವಿಶಾಲ ಹೃದಯದವರು, ಕನ್ನಡ ಚಿತ್ರಗಳಿಗಿಂತ ಬೇರೆ ಭಾಷೆಯ ಚಿತ್ರಗಳನ್ನೇ ಜಾಸ್ತಿ ನೋಡ್ತೇವೆ ಎಂಬರ್ಥದ ಮಾತುಗಳನ್ನಾಡಿದ್ದಾರೆ.
ಅಷ್ಟಕ್ಕೂ ಉಪ್ಪಿ ಪರಭಾಷೆಯ ಚಿತ್ರಗಳ ಬಗ್ಗೆ ಹೇಳಿದ್ದೇನು ನೀವೊಮ್ಮೆ ನೋಡಿ...
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.