ಏನ್ರೀ ತರೂರ್: ಕಾಂಗ್ರೆಸ್ ನಾಯಕನ ಫೋಟೋಗೆ ನೆಟ್ಟಿಗರು ಗುರ್!

Published : Jul 20, 2019, 02:41 PM IST
ಏನ್ರೀ ತರೂರ್: ಕಾಂಗ್ರೆಸ್ ನಾಯಕನ ಫೋಟೋಗೆ ನೆಟ್ಟಿಗರು ಗುರ್!

ಸಾರಾಂಶ

ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ನೆಟ್ಟಿಗರ ಕ್ಲಾಸ್| ಟ್ವಿಟ್ಟರ್‌ನಲ್ಲಿ ಫೋಟೋ ಶೇರ್ ಮಾಡಿ ಪೇಚಿಗೆ ಸಿಲುಕಿದ ತರೂರ್| ತರೂರ್ ಟೇಬಲ್ ಮೇಲೆ ತಲೆಕೆಳಗಾದ ರಾಷ್ಟ್ರಧ್ವಜ| ರಾಷ್ಟ್ರಧ್ವಜಕ್ಕೆ ಗೌರವ ನೀಡುವುದನ್ನು ಕಲಿತುಕೊಳ್ಳುವಂತೆ ತರೂರ್'ಗೆ ಸಲಹೆ|

ನವದೆಹಲಿ(ಜು.20): ಸುಮ್ಮನಿರಲಾರದೇ ಇರುವೆ ಬಿಟ್ಟುಕೊಂಡರು ಅಂತಾರಲ್ಲ ಅದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ಅಕ್ಷರಶಃ ಹೋಲುತ್ತದೆ.

ಶಶಿ ತರೂರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಎರಡು ಫೋಟೋಗಳು ಇದೀಗ ಭಾರೀ ವಿವಾಧ ಸೃಷ್ಟಿಸಿವೆ. ತರೂರ್ ಶೇರ್ ಮಾಡಿರುವ ಫೋಟೋದಲ್ಲಿ ಟೇಬಲ್ ಮೇಲೆ ಇಟ್ಟಿರುವ ಭಾರತದ ರಾಷ್ಟ್ರಧ್ವಜ ತಲೆಕೆಳಗಾಗಿರುವುದು ವಿವಾದ ಸೃಷ್ಟಿಸಿದೆ.

ಗುಜರಾತ್ ಮಾಜಿ ಐಪಿಎಸ್​ ಅಧಿಕಾರಿ ಸಂಜೀವ್​ ಭಟ್​ ಕುಟುಂಬ ಸದಸ್ಯರು ಶಶಿ ತರೂರ್​ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದರ ಫೋಟೋವನ್ನು ತರೂರ್ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿ ಭಟ್ ಪರ ಬ್ಯಾಟ್ ಬೀಸಿದ್ದರು.

ಆದರೆ ತರೂರ್ ಟೇಬಲ್ ಮೇಲಿನ ರಾಷ್ಟ್ರಧ್ವಜ ತಲೆಕೆಳಗಾಗಿದ್ದು, ಇದು ನೆಟ್ಟಿಗರನ್ನು ಕೆರಳಿಸಿದೆ. ಭಟ್ ಅವರಿಗೆ ನ್ಯಾಯ ಸಿಗುವುದೋ ಇಲ್ಲವೋ ಆಮೇಲಿನ ಮಾತು. ಮೊದಲು ನೀವು ರಾಷ್ಟ್ರಧ್ವಜಕ್ಕೆ ಗೌರವ ನೀಡುವುದನ್ನು ಕಲಿತುಕೊಳ್ಳಿ ಎಂದು ತರೂರ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋವಾ ಮಾಲ್ ಸಮೇತ ಅರಣ್ಯದಲ್ಲಿ ಸಿಕ್ಕಿಬಿದ್ದ ವ್ಯಕ್ತಿ; ಗಾಡಿ ಹಿಡಿದ ಖಾಕಿ, ಆರೋಪಿ ಪರಾರಿ!
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು