
ಉಡುಪಿ[ಜು.24]: ಶೀರೂರು ಶ್ರೀಗಳ ಅಸಹಜ ಸಾವಿನ ಬಗ್ಗೆ ಮಾತನಾಡಿದ ಕೇಮಾರು ಶ್ರೀಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಕೇಮಾರು ಸಾಂದೀಪಿನಿ ಆಶ್ರಮದ ಈಶ ವಿಠಲದಾಸ ಸ್ವಾಮೀಜಿ, ಶೀರೂರು ಸ್ವಾಮೀಜಿ ಅವರ ಅಸಹಜ ಸಾವಿಗೆ ನ್ಯಾಯ ದೊರಕಬೇಕೆಂದು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಕೇಮಾರು ಶ್ರೀಗಳಿಗೆ ಸೋದೆ ಹಾಗೂ ಪೇಜಾವರ ಮಠದ ಆಪ್ತವರ್ಗಗಳಿಂದ ಬೆದರಿಸಿ ಬಾಯಿ ಮುಚ್ಚಿಸುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಶಂಕೆ ದಟ್ಟವಾಗುತ್ತಿದೆ. ಬೆದರಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಕೇಮಾರು ಶ್ರೀಗಳು ಅಗತ್ಯಬಿದ್ದರೆ ಠಾಣೆಗೆ ದೂರು ನೀಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಉಡುಪಿ ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಜುಲೈ 19ರಂದು ಮೃತಪಟ್ಟಿದ್ದರು. ಶ್ರೀಗಳ ಹೊಟ್ಟೆಯಲ್ಲಿ ತೀವ್ರ ರಕ್ತಸ್ರಾವವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.