
ನವದೆಹಲಿ(ಸೆ.18): ಭಯೋತ್ಪಾದಕರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಈ ಹಿಂದೆ ನಿಗದಿಯಾಗಿದ್ದ ರಷ್ಯಾ- ಅಮೆರಿಕ ಪ್ರವಾಸವನ್ನು ಮುಂದೂಡಿದ್ದಾರೆ. ಇವತ್ತು ಗೃಹ ಸಚಿವ ರಾಜನಾಥ್ ಸಿಂಗ್ ರಷ್ಯಾ- ಅಮೆರಿಕ ಪ್ರವಾಸಕ್ಕೆ ತೆರಳಬೇಕಿತ್ತು.
ರಷ್ಯಾ- ಅಮೆರಿಕ ಪ್ರವಾಸದ ವೇಳೆ ರಾಜನಾಥ್ ಸಿಂಗ್ ಉಭಯ ರಾಷ್ಟ್ರಗಳ ಗೃಹ ಸಚಿವರೊಂದಿಗೆ ಪಾಕಿಸ್ತಾನ ಭಾರತದ ಗಡಿ ಪ್ರದೇಶದಲ್ಲಿ ನಡೆಸುತ್ತಿರುವ ಭಯೋತ್ಪಾದನೆಯ ವಿಷಯವನ್ನು ಪ್ರಮುಖವಾಗಿ ಚರ್ಚಿಸಲಿದ್ದರು. ಆದರೆ ರಾಜನಾಥ್ ಸಿಂಗ್ ರಷ್ಯಾಗೆ ತೆರಳಬೇಕಿದ್ದ ದಿನವೇ ಜಮ್ಮು-ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇನ್ನು ಗೃಹ ಸಚಿವರ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸಹ ಭಾಗಿಯಾಗುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.