
ಮುಂಬೈ(ಏ.06): ಸರ್ಕಾರಗಳು ರೈತರ ಸಾಲ ಮನ್ನಾ ಮಾಡಲು ಮುಂದಾಗಿರುವುದಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಊರ್ಜಿತ್ ಪಟೇಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಥ ಕ್ರಮಗಳಿಂದ ‘ಪ್ರಾಮಾಣಿಕ ಸಾಲ ಸಂಸ್ಕೃತಿ’ಗೆ ಧಕ್ಕೆ ಬರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಉತ್ತರಪ್ರದೇಶದ ಬಿಜೆಪಿ ಸರ್ಕಾರ 36 ಸಾವಿರ ಕೋಟಿ ರುಪಾಯಿ ರೈತರ ಸಾಲ ಮನ್ನಾ ಮಾಡಿದ ಬೆನ್ನಲ್ಲೇ ಪಟೇಲ್ ಈ ಹೇಳಿಕೆ ನೀಡಿದ್ದಾರೆ.
‘ಸಾಲ ಮನ್ನಾದಿಂದ ಪ್ರಾಮಾಣಿಕವಾಗಿ ಸಾಲ ಹಿಂದಿರುಗಿಸುವವರನ್ನು ನಿರ್ಲಕ್ಷಿಸಿದಂತಾಗುತ್ತದೆ. ಇದು ಸಾಲ ಮರುಪಾವತಿ ಶಿಸ್ತಿಗೆ ಧಕ್ಕೆ ತರುತ್ತದೆ. ಇನ್ನು ಮುಂದೆ ಸಾಲ ಪಡೆಯುವವರು ಸಾಲ ತೀರಿಸಲು ಹಿಂದೇಟು ಹಾಕಲಾರಂಭಿಸುತ್ತಾರೆ. ತೆರಿಗೆದಾರರ ಹಣ ಸಾಲ ಪಡೆದವರಿಗೆ ಹೋದಂತಾಗುತ್ತದೆ’ ಎಂದು ದ್ವೈಮಾಸಿಕ ವಿತ್ತ ನೀತಿ ಪ್ರಕಟಣೆ ವೇಳೆ ಹೇಳಿದ್ದಾರೆ.
2014ರಲ್ಲಿ ಹಿಂದಿನ ಗವರ್ನರ್ ರಘುರಾಂ ರಾಜನ್ ಕೂಡಾ ಸಾಲ ಮನ್ನಾ ಮಾಡುವ ಸರ್ಕಾರದ ಕ್ರಮವನ್ನು ವಿರೋಧಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.