
ವಾಷಿಂಗ್ಟನ್(ಮಾ.21): ದೇಶಾದ್ಯಂತ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಅದರಂತೆ ವಿದೇಶಗಳಲ್ಲೂ ಭಾರತೀಯರ ಬಣ್ಣದ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.
ಈ ಮಧ್ಯೆ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು, ಅಮೆರಿಕದ ಅಂದಿನ ಅಧ್ಯಕ್ಷ ಜಾನ್ ಎಫ್ ಕೆನಡಿ ಅವರ ಪತ್ನಿ ಜಾಕ್ವಲಿನ್ ಕೆನಡಿ ಅವರೊಂದಿಗೆ ಹೋಳಿ ಆಡಿದ್ದ ಫೋಟೋವೊಂದನ್ನು ಅಮೆರಿಕ ಹರಿಬಿಟ್ಟಿದೆ.
ಮುಂಬೈನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದು, 1962ರಲ್ಲಿ ನೆಹರು ಅವರು ಅಮೆರಿಕದ ಪ್ರಥಮ ಮಹಿಳೆ ಜಾಕ್ವಲಿನ್ ಕೆನಡಿ ಜೊತೆ ಹೋಳಿ ಆಡಿದ್ದರು ಎಂದು ಹೇಳಿದೆ.
ಭಾರತ-ಅಮೆರಿಕ ನಡುವಿನ ಸಂಬಂಧ ಹಳೆಯದಾದಷ್ಟು ಗಟ್ಟಿಯಾಗುತ್ತಿದೆ ಎಂದು ಹೇಳಿರುವ ರಾಯಭಾರ ಕಚೇರಿ, ಪರಸ್ಪರರ ಸಂಸ್ಕೃತಿಯನ್ನು ಗೌರವಿಸುವುದನ್ನು ಉಭಯ ರಾಷ್ಟ್ರಗಳು ಪಾಲಿಸಿಕೊಂಡು ಬಂದಿವೆ ಎಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.